ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

Date:

ಶನಿವಾರ ರಾತ್ರಿ ತಮಿಳುನಾಡಿನ ಶಿವಗಂಗೈಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದೆ.

ಶಿವಗಂಗೈ ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ತಮ್ಮ ಮಾಲೀಕತ್ವದ ಇಟ್ಟಿಗೆಗೂಡಿನಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಮಾರ್ಗಮಧ್ಯೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ದಾರಿಹೋಕರು ರಕ್ತದ ಮಡುವಿನಲ್ಲಿದ್ದ ಸೆಲ್ವಕುಮಾರ್ ಅವರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ಸೆಲ್ವಕುಮಾರ್‌ ಮೃತಪಟ್ಟಿದ್ದರು. ಪೊಲೀಸರು ಸೆಲ್ವಕುಮಾರ್ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಲ್ವಕುಮಾರ್ ಹತ್ಯೆ ಖಂಡಿಸಿ ಗ್ರಾಮಸ್ಥರು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.  ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಮೃತದೇಹ ಸ್ವೀಕರಿಸಲು ನಿರಾಕರಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗಾಗಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಆರೋಪಿಸಿದರು.

ಈ ನಡುವೆ ಶಿವಗಂಗೈ ಸಂಸದ ಕಾರ್ತಿ ಪಿ ಚಿದಂಬರಂ ಹತ್ಯೆಯಲ್ಲಿ ಯಾವುದೇ ರಾಜಕೀಯ ಕೈವಾಡವಿಲ್ಲ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಸೆಲ್ವಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಪಕ್ಷದಿಂದ ನೆರವು ನೀಡುವ ಭರವಸೆ ನೀಡಿದರು.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ನಡೆದ ಎರಡನೇ ರಾಜಕೀಯ ಕೊಲೆ ಇದಾಗಿದೆ. ತಮಿಳುನಾಡಿನ ಕಡಲೂರಿನಲ್ಲಿ ಶನಿವಾರ ಎಐಎಡಿಎಂಕೆ ಕಾರ್ಯಕರ್ತನನ್ನು ಕೊಲೆ ಮಾಡಲಾಗಿತ್ತು.

ಜುಲೈ 5 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈನಲ್ಲಿ ಹತ್ಯೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...