ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

Date:

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ ಶೀಟರ್ ತಿರುವೆಂಗಡಂ ಅನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರ್ಮ್‌ಸ್ಟ್ರಾಂಗ್ ಕೊಲೆಗೂ ಮುನ್ನ ತಿರುವೆಂಗಡಂ ಆರ್ಮ್‌ಸ್ಟ್ರಾಂಗ್ ಅವರ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಅವರನ್ನು ಹಿಂಬಾಲಿಸುತ್ತಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಜುಲೈ 5ರಂದು ಚೆನ್ನೈನ ಅವರ ಮನೆಯ ಸಮೀಪವೇ ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.

ಇದನ್ನು ಓದಿದ್ದೀರಾ?   ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆ; ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿರುವ ತನ್ನ ಮನೆಯ ಬಳಿ ಬಿಎಸ್‌ಪಿಯ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಆರ್ಮ್‌ಸ್ಟ್ರಾಂಗ್ ಅವರನ್ನು ಕರೆದೊಯ್ದಿದ್ದು, ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ. ಈ ಪೈಕಿ ಓರ್ವ ಆರೋಪಿಯ ಎನ್‌ಕೌಂಟರ್ ನಡೆದಿದೆ.

ಈ ಹತ್ಯೆಯು ರಾಜ್ಯದಲ್ಲಿ ದೊಡ್ಡ ರಾಜಕೀಯ ತಲ್ಲಣವನ್ನು ಉಂಟು ಮಾಡಿದೆ. ವಿರೋಧ ಪಕ್ಷಗಳು ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಕಂಡು ಬರುತ್ತದೆ ಎಂದು ಆರೋಪಿಸಿವೆ.

ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಆರ್ಮ್‌ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಇದುವರೆಗೆ ಬಂಧಿಸಲ್ಪಟ್ಟವರು ನಿಜವಾದ ಅಪರಾಧಿಗಳಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಸ್ಟಾಲಿನ್ ಆರ್ಮ್‌ಸ್ಟ್ರಾಂಗ್ ಅವರ ಕುಟುಂಬವನ್ನು ಭೇಟಿ ಮಾಡಿದರು. ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಬಿಎಸ್‌ಪಿ ನಾಯಕನ ಪತ್ನಿ ಮತ್ತು ಇತರ ಕುಟುಂಬ ಸದಸ್ಯರಿಗೆ ಸಂತಾಪ ವ್ಯಕ್ತಪಡಿಸಿದ ಸ್ಟಾಲಿನ್, “ಭೀಕರ ಹತ್ಯೆಯಲ್ಲಿ ಭಾಗಿಯಾದ ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ” ಎಂದು ಭರವಸೆ ನೀಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...