ತಮಿಳುನಾಡು | ಸಹಪಾಠಿಗಳಿಂದ ಹಲ್ಲೆ, ಜಾತಿ ನಿಂದನೆ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

Date:

ಮೇಲ್ಜಾತಿಗೆ ಸೇರಿದ ಸಹಪಾಠಿಗಳು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವುದಕ್ಕೆ ಬೇಸರಗೊಂಡ ದಲಿತ ಸಮುದಾಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕಿರನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು 16 ವರ್ಷದ ವಿಷ್ಣು ಎಂದು ಗುರುತಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಈತ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅದೇ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಮೇಲ್ಜಾತಿ ವಿದ್ಯಾರ್ಥಿನಿಯೊಬ್ಬಳ ಜೊತೆ ವಿಷ್ಣು ಮಾತನಾಡಿದ್ದಕ್ಕೆ ಮೇಲ್ಜಾತಿ ಸಮುದಾಯಕ್ಕೆ ಸೇರಿದ ಸಹಪಾಠಿಗಳು ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ.

“ನಮ್ಮ ಮಗ ಶಾಲೆಯಿಂದ ಹಿಂತಿರುಗಿದ ನಂತರ ಜಾತಿ ನಿಂದನೆ ಹಾಗೂ ಹಲ್ಲೆಯಿಂದ ತುಂಬ ಬೇಸರಗೊಂಡಿದ್ದ. ಈ ಕಾರಣದಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ವಿಷ್ಣು ಅವರ ತಾಯಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ, ಪೊಲೀಸರು ಅಸಹಜ ಸಾವಿನ ಪ್ರಕರಣವನ್ನು ದಾಖಲಿಸಿದ್ದರು. ಆದರೆ ಈಗ ಅದನ್ನು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಸೆಕ್ಷನ್‌ಗಳನ್ನು ಸೇರಿಸಲು ಬದಲಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ದಲಿತ ಕೌನ್ಸಿಲರ್ ಮೇಲೆ ಹಲ್ಲೆ – ಜಾತಿ ನಿಂದನೆ; ಪ್ರಕರಣ ದಾಖಲು

“ನಾವು ಶೀಘ್ರದಲ್ಲೇ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುತ್ತೇವೆ. ಅಲ್ಲಿಯವರೆಗೆ ನಾವು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಏಕೆಂದರೆ, ಅದು ವಿಚಾರಣೆ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು” ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ವಾರದ ಹಿಂದೆ ತಿರುನೆಲ್ವೇಲಿ ಜಿಲ್ಲೆಯಲ್ಲಿ ಇಬ್ಬರು ದಲಿತ ಸಮುದಾಯದ ಯುವಕರನ್ನು ಸವರ್ಣೀಯ ಸಮುದಾಯದ 6 ಮಂದಿ ಗುಂಪು ವಿವಸ್ತ್ರಗೊಳಿಸುವುದರ ಜೊತೆ ಮೂತ್ರವಿಸರ್ಜನೆ ಮಾಡಿ ಯುವಕರ ಬಳಿಯಿದ್ದ ಹಣ ಮತ್ತು ಮೊಬೈಲ್‌ ಫೋನುಗಳನ್ನು ದೋಚಿದ್ದರು.

ತಮಿಳುನಾಡಿನಲ್ಲಿ ದಲಿತರ ಮೇಲಿನ ಇತ್ತೀಚಿನ ದೌರ್ಜನ್ಯಗಳ ಸರಣಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಚೆನ್ನೈ ಮೂಲದ ದಲಿತ ಬೌದ್ಧಿಕ ಕಲೆಕ್ಟಿವ್, ಇದನ್ನು ಕೊನೆಗೊಳಿಸಲು ಮಾರ್ಗೋಪಾಯಗಳನ್ನು ಸಮಾಲೋಚಿಸಲು ಸರ್ವಪಕ್ಷ ಸಭೆಗೆ ಕರೆ ನೀಡುವಂತೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...