ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತರೂಢ ಡಿಎಂಕೆ ಪಕ್ಷ ತನ್ನ ಮೈತ್ರಿಯ ಅಂಗ ಪಕ್ಷವಾಗಿರು ಸಿಪಿಐಗೆ ಐದು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ ಎಂದು ಪ್ರಕಟನೆಯ ಮೂಲಕ ತಿಳಿಸಿದೆ.
ಈ ಸಂಬಂಧಿಸಿದಂತೆ ಡಿಎಂಕೆ ಇಂದು(ಬುಧವಾರ) ಪ್ರಕಟಣೆ ಹೊರಡಿಸಿದೆ. ಎರಡೂ ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆಗಳ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಡಿಎಂಕೆ ತಿಳಿಸಿದೆ.
ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಐದು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದು, ಆ ಕ್ಷೇತ್ರಗಳು ಯಾವುವು ಎನ್ನುವುದನ್ನು ಈವರೆಗೆ ಬಹಿರಂಗಪಡಿಸಿಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. 2026ರ ತಮಿಳುನಾಡು ವಿಧಾನಸಭೆ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ.





