ತಮಿಳುನಾಡು | ಅಕ್ರಮಗಳನ್ನು ಬಯಲಿಗೆಳೆದ ವ್ಯಕ್ತಿಯನ್ನು ಕಾರು ಹರಿಸಿ ಕೊಂದ ಡಿಎಂಕೆ ನಾಯಕ; ಬಂಧನ

Date:

ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿವೆ ಎನ್ನಲಾದ ಹಲವು ಅಕ್ರಮಗಳನ್ನು ಬಯಲಿಗೆಳೆದ ವ್ಯಕ್ತಿಯ ಮೇಲೆ ಕಾರು ಹರಿಸಿ, ಕೊಲೆ ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ವಿನಯಾಗಂ ಪಳನಿಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತನ ಹೆಸರು ಕೂಡ ಪಳನಿಸ್ವಾಮಿ. ಆತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಅವರ ಮೇಲೆ ಆರೋಪಿ, ಡಿಎಂಕೆ ನಾಯಕ ವಿನಯಾಗಂ ಕಾರು ಹರಿಸಿ ಕೊಲೆ ಮಾಡಿದ್ದಾರೆ.

ಘಟನೆ ಬೆಳಕಿಗೆ ಬಂದ ಆರಂಭದಲ್ಲಿ ವಿನಯಾಗಂ ಮದ್ಯಪಾನ ಮಾಡಿದ್ದರು. ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದರಿಂದ ಪ್ರಕರಣ ನಡೆದಿದೆ. ಇದೊಂದು ‘ಹಿಟ್ ಅಂಡ್ ರನ್’ ಪ್ರಕರಣ ಎಂದು ಬಿಂಬಿಸಲಾಗಿತ್ತು. ಆದರೆ, ಮೃತರ ಕುಟುಂಬವು ಮೃತ ಪಳನಿಸ್ವಾಮಿ ಅವರು ವಿನಯಾಗಂ ಅವರ ಅಕ್ರಮವನ್ನು ಬಹಿರಂಗ ಪಡಿಸಿದ್ದರು. ಆ ಕಾರಣದಿಂದಲೇ ಕೊಲೆ ಮಾಡಿದ್ದಾರೆ ಎಂದು ಶಂಕಿಸಿ, ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆಯು ಕೊಲೆ ಪ್ರಕರಣವಾಗಿ ತಿರುವು ಪಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಲೇಖನ ಓದಿದ್ದೀರಾ?: ಸಿ.ಪಿ ರಾಧಾಕೃಷ್ಣನ್ | ಸಂಘ ಪರಿವಾರವನ್ನು ಬಿಟ್ಟು ದೇಶ, ಸಂವಿಧಾನಕ್ಕೆ ನಿಷ್ಠವಾಗಿರಲಿ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುವಂತೆ; “ಖಾಸಗಿ ರಸ್ತೆಯನ್ನು ಪಂಚಾಯತಿಗೆ ಹಸ್ತಾಂತರಿಸದೇ ಇರುವ ಬಗ್ಗೆ ವಿನಯಾಗಂ ವಿರುದ್ಧ ಪಳನಿಸ್ವಾಮಿ (ಬಲಿಪಶು) ದೂರು ನೀಡಿದ್ದರು. ಕೃತ್ಯಕ್ಕೆ ಇದೇ ಕಾರಣವೆಂದು ಮೇಲ್ನೋಟಕ್ಕೆ ಕಾಣುತ್ತದೆ. ಇದಲ್ಲದೆ, ಇನ್ನೂ ಹಲವು ಅಕ್ರಮಗಳನ್ನು ಪಳನಿಸ್ವಾಮಿ ಬಯಲಿಗೆಳೆದಿದ್ದರು. ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿರುವುದಾಗಿ ‘ಎನ್‌ಡಿ ಟಿವಿ’ ವರದಿ ಮಾಡಿದೆ.

ರಾಜ್ಯದಲ್ಲಿ ಅಪರಾಧ ಹೆಚ್ಚಳ ಮತ್ತು ಕಾನೂನು ಸುವ್ಯವಸ್ಥೆ ಕುಸಿಯುತ್ತಿದೆ ಎಂದು ಆಡಳಿತಾರೂಢ ಡಿಎಂಕೆ ವಿರುದ್ಧ ವಿರೋಧ ಪಕ್ಷಗಳುಆರೋಪಿಸುತ್ತಿವೆ. ಆದರೆ, ಈ ಆರೋಪಗಳನ್ನು ಆಡಳಿತ ಪಕ್ಷ ಮತ್ತು ರಾಜ್ಯ ಪೊಲೀಸರು ನಿರಾಕರಿಸಿದ್ದಾರೆ. ಕಾನೂನು-ಸುವ್ಯವಸ್ಥೆಯನ್ನು ಉಲ್ಲಂಘಿಸುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...