ತಮಿಳುನಾಡು ಚುನಾವಣೆ | 5 ಆಡಳಿತ ರಾಜಧಾನಿ ಸೃಷ್ಟಿಸುವ ಭರವಸೆ ನೀಡಿದ ಎನ್‌ಟಿಕೆ

Date:

ತಮಿಳುನಾಡು ಚುನಾವಣೆಯಲ್ಲಿ ಆಡಳಿತರೂಢ ಡಿಎಂಕೆ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಗೆ ಸವಾಲು ಹಾಕಿ ಚುನಾವಣಾ ಸ್ಪರ್ಧೆಗೆ ಮುಂದಾಗಿರುವ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಪಕ್ಷದ ಮುಖ್ಯಸ್ಥ ಸೀಮನ್‌ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಆಡಳಿತವನ್ನು ವಿಕೇಂದ್ರೀಕರಣಗೊಳಿಸುವ ಭರಸವೆಯನ್ನು ತನ್ನ ಪ್ರಣಾಳಿಕೆಯಲ್ಲಿ ಎನ್ ಟಿಕೆ ನೀಡಿದ್ದು, ತಮಿಳುನಾಡು ಆಡಳಿತದಲ್ಲಿ ಸುಧಾರಣೆ ತರುವುದಾಗಿ ಹೇಳಿದೆ.

ಐದು ಆಡಳಿತ ರಾಜಧಾನಿಯನ್ನಾಗಿ ಮಾಡುವುದಾಗಿ ಹೇಳಿದ್ದು, ಆಡಳಿತ ಸುಧಾರಣಾ ಕ್ರಮಗಳನ್ನು ಕೂಡ ಪ್ರಸ್ತಾಪಿಸಿದೆ. ತಿರುಚ್ಚಿಯನ್ನು ಆಡಳಿತ ರಾಜಧಾನಿಯಾಗಿ, ಕೊಯಮತ್ತೂರನ್ನು ಕೈಗಾರಿಕಾ ಮತ್ತು ವ್ಯವಹಾರ ರಾಜಧಾನಿಯಾಗಿ, ಚೆನ್ನೈಯನ್ನು ತಂತ್ರಜ್ಞಾನ ರಾಜಧಾನಿಯಾಗಿ, ಮಧುರೈಯನ್ನು ಸಾಂಸ್ಕೃತಿಕ ಮತ್ತು ಪರಂಪರೆಯ ರಾಜಧಾನಿಯಾಗಿ ಮತ್ತು ಕನ್ಯಾಕುಮಾರಿಯನ್ನು ತಾತ್ವಿಕ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆಡಳಿತ ಕ್ರಮದಿಂದ ಪ್ರಾದೇಶಿಕತೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದಿರುವ ಎನ್ ಟಿಕೆ, ಆಡಳಿತದಲ್ಲಿ ಸ್ಥಳೀಯರಿಗೆ ಮೀಸಲಾತಿ ಆಧಾರದಲ್ಲಿ ಅವಕಾಶ ಮಾಡಿಕೊಡುತ್ತದೆ ಎಂದು ವಿವರಿಸಿದೆ.

ಇದನ್ನೂ ಓದಿ : ಕೇರಳ ಚುನಾವಣೆ | ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ನಾಲ್ವರ ಪೈಪೋಟಿ; ಹಿಂದೆ ಸರಿಯುವ ಮಾತೇ…

400 ಪುಟಗಳ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮುಖ್ಯಸ್ಥ ಸೀಮನ್, ಎಸ್‌ಪಿ ಆದಿತನಾರ್ ಹೆಸರಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಭರಸವೆ ನೀಡುವುದರ ಜೊತೆಗೆ ಉಚಿತ ಶುದ್ಧ ನೀರಿನ ಪೂರೈಕೆ ಮಾಡುವ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು ಹಾಗೂ ಪ್ಲಾಸ್ಟಿಕ್‌ ಬಾಟಲ್‌ ಗಳಲ್ಲಿ ನೀರಿನ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು, ಸಿದ್ಧ ಔಷಧಕ್ಕಾಗಿ ಮತ್ತು ನ್ಯಾಚುರಲ್‌ ಟ್ರೀಟ್‌ಮೆಂಟ್‌ ನೀಡುವ ಉದ್ದೇಶದಿಂದ ಪ್ರತ್ಯೇಕ ಸಚಿವಾಲಯವನ್ನು ರಚಿಸಲು ಕ್ರಮ ತೆಗದುಕೊಳ್ಳಲಾಗುವುದು. ಮದ್ಯ, ತಂಬಾಕು, ಗಾಂಜಾ ಮತ್ತು ಇತರ ಮಾದಕ ದ್ರವ್ಯಗಳ ಮೇಲೆ ಸಂಪರ‍್ಣ ನಿಷೇಧವನ್ನು ಹೇರಲಾಗುವುದು. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ವಿಶೇಷ ಪಡೆಯನ್ನು ರಚಿಸುವುದಾಗಿಯೂ, ಕೃಷಿ ಕೀಟನಾಶಕವನ್ನು ಹಂತಹಂತವಾಗಿ ನಿಷೇಧ ಮಾಡುವ ಭರವಸೆಯ ಜೊತೆಗೆ, 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ಪಿಂಚಣಿ ನೀಡಲಾಗುವುದು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...