ತಮಿಳುನಾಡು | SIRನಿಂದ 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಆತಂಕ

Date:

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದ್ದು, ಡಿಸೆಂಬರ್ 16ರಂದು ಕರಡು ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ 6.41 ಕೋಟಿ ಮತದಾರರ ಪೈಕಿ ಸುಮಾರು 85 ಲಕ್ಷ ಮತದಾರರು ಮತಪಟ್ಟಿಯಿಂದ ಹೊರಗುಳಿಯುವ ಆತಂಕ ಎದುರಾಗಿದೆ.

ಮತದಾರ ಪಟ್ಟಿಯಿಂದ ಹೊರಗುಳಿಯುವ ಮತದಾರರ ಪೈಕಿ , 26.18 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 10.73 ಲಕ್ಷ ಮಂದಿ ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಬುಧವಾರ ಸಂಜೆ ಬಿಡುಗಡೆಯಾದ ಪ್ರಕಟಣೆಯಲ್ಲಿ, ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿಯು, “ಎಸ್‌ಐಆರ್ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಪ್ರಕ್ರಿಯೆಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಕರಡು ಪಟ್ಟಿಯನ್ನು ಸಿದ್ಧಪಡಿಸುವ ಮೊದಲು ಸಂಗ್ರಹಿಸಲಾಗದ ಎಲ್ಲ ಫಾರ್ಮ್‌ಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳೊಂದಿಗೆ (ಬಿಎಲ್‌ಎ) ಪರಿಶೀಲಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈವರೆಗೆ ಸಂಗ್ರಹಿಸಲಾದ ಮತದಾರರ ಮಾಹಿತಿಯ ಫಾರ್ಮ್‌ಗಳ ಸಂಖ್ಯೆ ಮತ್ತು ಅವುಗಳಲ್ಲಿ ರಿಜೆಕ್ಟ್‌ ಮಾಡಲಾದ ಫಾರ್ಮ್‌ಗಳ ಸಂಖ್ಯೆಯನ್ನು ಒದಗಿಸುವಂತೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗವನ್ನು ಕೇಳಿವೆ. ಆದಾಗ್ಯೂ, ಆಯೋಗವು ಫಾರ್ಮ್‌ಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಒಟ್ಟು ಫಾರ್ಮ್‌ಗಳಲ್ಲಿ 99.45% (6.38 ಕೋಟಿ) ಫಾರ್ಮ್‌ಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಡಿಸೆಂಬರ್ 16ರೊಳಗೆ ಎಲ್ಲವೂ ಪೂರ್ಣಗೊಳಿಸಿ, ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...