ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ

Date:

ವಿಧಾನಸಭೆಯಲ್ಲಿ ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಅಸಮಾಧಾನಗೊಂಡ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಸೋಮವಾರ ವಿಧಾನಸಭೆಯಲ್ಲಿ ಸಾಂಪ್ರದಾಯಿಕ ಭಾಷಣವನ್ನು ಮಾಡದೆ ವಿಧಾನಸಭೆಯಿಂದ ನಿರ್ಗಮಿಸಿದ್ದಾರೆ.

ವಿಧಾನಸಭೆಯಲ್ಲಿ ತಮಿಳುನಾಡಿನ ನಾಡಗೀತೆ ತಮಿಳ್ ತಾಯ್ ವಜುತು ನುಡಿಸಲಾಗಿದೆ. ಆದರೆ ಆ ಬಳಿಕ ರಾಷ್ಟ್ರಗೀತೆಯನ್ನು ನುಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಆದರೆ ಅದು ನುಡಿಸಲಾಗಿಲ್ಲ ಎಂದು ಆರೋಪಿಸಲಾಗಿದೆ.

ಈ ಕುರಿತು ತಮಿಳು ನಾಡಿನ ರಾಜಭವನ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ʼಇಂದು ತಮಿಳುನಾಡು ವಿಧಾನಸಭೆಯಲ್ಲಿ ಭಾರತದ ಸಂವಿಧಾನ ಮತ್ತು ರಾಷ್ಟ್ರಗೀತೆಗೆ ಮತ್ತೊಮ್ಮೆ ಅವಮಾನ ಮಾಡಲಾಗಿದೆ ರಾಷ್ಟ್ರಗೀತೆಯನ್ನು ಗೌರವಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯವಾಗಿದೆ. ರಾಜ್ಯಪಾಲರ ಭಾಷಣದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಇದನ್ನು ಎಲ್ಲ ರಾಜ್ಯ ವಿಧಾನಸಭೆಗಳಲ್ಲಿ ನುಡಿಸಲಾಗುತ್ತದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಇಂದು ರಾಜ್ಯಪಾಲರು ಸದನಕ್ಕೆ ಆಗಮಿಸಿದಾಗ ಕೇವಲ ʼತಮಿಳು ತಾಯ್ ವಾಜತ್ತುʼ ಮಾತ್ರ ನುಡಿಸಲಾಗಿದೆ. ರಾಜ್ಯಪಾಲರು ಸದನದ ಸಾಂವಿಧಾನಿಕ ಕರ್ತವ್ಯವನ್ನು ಗೌರವಪೂರ್ವಕವಾಗಿ ನೆನಪಿಸಿ ರಾಷ್ಟ್ರಗೀತೆಯನ್ನು ನುಡಿಸಲು ಸದನದ ನಾಯಕರಾದ ಮುಖ್ಯಮಂತ್ರಿ ಮತ್ತು ಸಭಾಪತಿಯವರಿಗೆ ಮನಃಪೂರ್ವಕವಾಗಿ ಮನವಿ ಮಾಡಿದ್ದಾರೆ. ಆದರೆ, ಅವರು ಕಟುವಾಗಿ ನಿರಾಕರಿಸಿದ್ದಾರೆ. ಇದು ತೀವ್ರ ಕಳವಳಕಾರಿ ವಿಷಯವಾಗಿದೆʼ ಎಂದು ಹೇಳಿದೆ.

ರಾಜ್ಯಪಾಲರು ವಿಧಾನಸಭೆಯಲ್ಲಿ ಕೇವಲ ಮೂರು ನಿಮಿಷಗಳ ಕಾಲ ಹಾಜರಿದ್ದು ಸದನದಿಂದ ನಿರ್ಗಮಿಸಿದ್ದಾರೆ. ರಾಜ್ಯಪಾಲರ ಕ್ರಮ ಖಂಡಿಸಿ ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...