ತಮಿಳುನಾಡು ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 65ಕ್ಕೆ ಏರಿಕೆ

Date:

ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಭಾನುವಾರ ಸಂಜೆ 4 ಗಂಟೆಯವರೆಗೆ ರಾಜ್ಯಾದ್ಯಂತ 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಇಬ್ಬರು ಕಲ್ಲಾಕುರಿಚಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುದುಚೇರಿಯಲ್ಲಿ ಆರು ಮಂದಿ, ಸೇಲಂ ಸರಕಾರಿ ಆಸ್ಪತ್ರೆಯಲ್ಲಿ ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾಗಿ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳ್ಳಭಟ್ಟಿ ದುರಂತದಲ್ಲಿ ಜನರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಈ ಬಗ್ಗೆ ಪರಿಶೀಲನೆ ನಡೆಸಲು ಎನ್‌ಸಿಡಬ್ಲ್ಯೂ ಸದಸ್ಯೆ ಖುಷ್ಬು ಸುಂದರ್ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

ಖುಷ್ಬು ಸುಂದರ್ ನೇತೃತ್ವದ ರಾಷ್ಟ್ರೀಯ ಮಹಿಳಾ ಆಯೋಗದ ಮೂವರು ಸದಸ್ಯರ ನಿಯೋಗವು ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದೆ.

ಇನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತದ ಸಿಬಿಐ ತನಿಖೆಗೆ ಒತ್ತಾಯಿಸಿ ಮತ್ತು ಡಿಎಂಕೆ ಸರ್ಕಾರದ ಅಸಮರ್ಥತೆಗಾಗಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...