ತಮಿಳುನಾಡು SIR |ಮತಪಟ್ಟಿಯಿಂದ 74 ಲಕ್ಷ ಮತದಾರರನ್ನು ಹೊರಹಾಕಿದ ಚು.ಆಯೋಗ

Date:

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮುಕ್ತಾಯಗೊಂಡಿದೆ. ಎಸ್‌ಐಆರ್‌ಗೂ ಮುನ್ನ ರಾಜ್ಯದಲ್ಲಿದ್ದ 6.41 ಕೋಟಿ ಮತದಾರರ ಸಂಖ್ಯೆ, ಈಗ 5.67 ಕೋಟಿಗೆ ಇಳಿದಿದೆ. ಬರೋಬ್ಬರಿ 74 ಲಕ್ಷ ಮತದಾರರನ್ನು (11.5%) ಮತಪಟ್ಟಿಯಿಂದ ಚುನಾವಣಾ ಆಯೋಗವು ಕಿತ್ತುಹಾಕಿದೆ.

2025ರ ಡಿಸೆಂಬರ್ 19ರಂದು ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಗ, 97.34 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿತ್ತು. ಆನಂತರ, ಸಲ್ಲಿಸಲಾದ ಆಕ್ಷೇಪಗಳನ್ನು ಪರಿಶೀಲಿಸಲಾಗಿದ್ದು, ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಆದರೆ, 74 ಲಕ್ಷ ಜನರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯ ಚುನಾವಣಾ ಅಧಿಕಾರಿ (CEO) ಅರ್ಚನಾ ಪಟ್ನಾಯಕ್, “2026ರ ಜನವರಿ 30ರವರೆಗೆ ಮತಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆಕ್ಷೇಪಣೆಗಳ ಪರಿಶೀಲನೆ ಬಳಿಕ 27.53 ಲಕ್ಷ ಮತದಾರರನ್ನು ಮರಳಿ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಜೊತೆಗೆ, 4.23 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ. ಇದರಿಂದಾಗಿ ಕರಡು SIR ಪಟ್ಟಿಯಲ್ಲಿ ಅಂತಿಮವಾಗಿ 5.67 ಕೋಟಿ ಮತದಾರರು ಉಳಿದಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಭಾರತದಲ್ಲಿ ಮಾವೋವಾದ ಅಳಿಯಿತೇ; ಕಮ್ಯೂನಿಸ್ಟ್ ವಿಚಾರಧಾರೆಗೆ ಸಂಘಪರಿವಾರ ಭಯಪಡುವುದೇಕೆ?

2025ರ ಸೆಪ್ಟೆಂಬರ್‌ನಲ್ಲಿ ಬಿಹಾರದಲ್ಲಿ ಎಸ್‌ಐರ್ ಪ್ರಕ್ರಿಯೆ ಪೂರ್ಣಗೊಂಡ ನಂತರ, ತಮಿಳುನಾಡು ಸೇರಿದಂತೆ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ಆರಂಭಸಲಾಗಿತ್ತು. ಈ ರಾಜ್ಯಗಳ ಪೈಕಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮಾತ್ರ ಇನ್ನೂ ಅಂತಿಮ SIR ಪಟ್ಟಿ ಬಿಡುಗಡೆಯಾಗಿಲ್ಲ. ಉಳಿದ, 9 ರಾಜ್ಯಗಳಲ್ಲಿ ಬರೋಬ್ಬರಿ 4 ಕೋಟಿ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ.

ತಮಿಳುನಾಡಿನ ಒಟ್ಟು 5.67 ಕೋಟಿ ಮತದಾರರಲ್ಲಿ 2,77,38,925 ಪುರುಷರು, 2,89,60,838 ಮಹಿಳೆಯರು, 7,617 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಈ ಪೈಕಿ, 12.51 ಲಕ್ಷ (2.21%) 18-19 ವರ್ಷ ವಯಸ್ಸಿನವರು. 4.63 ಲಕ್ಷ ಅಂಗವಿಕಲರು ಹಾಗೂ 3.99 ಲಕ್ಷ ಮತದಾರರು 85 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...