ಹಿಂದಿಗೆ ನಿಷೇಧ | ತಮಿಳುನಾಡು ಸರ್ಕಾರದ ಹೊಸ ಮಸೂದೆ ರಾಜ್ಯದಲ್ಲಿ ಫಲಕ, ಸಿನಿಮಾ, ಹಾಡುಗಳಿಗೆ ತಡೆ

Date:

ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಹಿಂದಿ ಭಾಷೆಯ ಒತ್ತಾಯವನ್ನು ನಿಷೇಧಿಸುವ ಗುರಿಯನ್ನು ಹೊಂದಿರುವ ಮಸೂದೆಯೊಂದನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ರಾತ್ರಿ ಕಾನೂನು ತಜ್ಞರೊಂದಿಗೆ ತುರ್ತು ಸಭೆ ನಡೆದಿದ್ದು, ಈ ಮಸೂದೆಯ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಈ ಮಸೂದೆಯು ತಮಿಳುನಾಡಿನಾದ್ಯಂತ ಹಿಂದಿ ಫಲಕಗಳು, ಬೋರ್ಡ್‌ಗಳು, ಚಲನಚಿತ್ರಗಳು ಮತ್ತು ಗೀತೆಗಳನ್ನು ನಿಷೇಧಿಸುವ ಉದ್ದೇಶ ಹೊಂದಿದೆ. ಆದರೆ, ಈ ಕ್ರಮವು ಭಾರತೀಯ ಸಂವಿಧಾನಕ್ಕೆ ಅನುಗುಣವಾಗುವ ರೀತಿಯಲ್ಲಿ ಮಸೂದೆ ಮಂಡಿಸಲು ಸಲಹೆ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಡಿಎಂಕೆ ಹಿರಿಯ ನಾಯಕ ಟಿಕೆಎಸ್ ಇಳಂಗೋವನ್ ಈ ಬಗ್ಗೆ ಪ್ರತಿಕ್ರಿಯಿಸಿ, “ನಾವು ಸಂವಿಧಾನಕ್ಕೆ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ನಾವು ಸಂವಿಧಾನವನ್ನು ಗೌರವಿಸುತ್ತೇವೆ. ನಮ್ಮ ವಿರೋಧವು ಕೇವಲ ಹಿಂದಿಯ ಒತ್ತಾಯಕ್ಕೆ ಮಾತ್ರ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಈ ನಡೆಯನ್ನು ಬಿಜೆಪಿಯ ವಿನೋಜ್ ಸೆಲ್ವಂ “ಮೂರ್ಖತನ ಮತ್ತು ಅಸಂಗತ” ಎಂದು ಕರೆದಿದ್ದಾರೆ. “ಭಾಷೆಯನ್ನು ರಾಜಕೀಯ ಉಪಕರಣವಾಗಿ ಬಳಸಬಾರದು” ಎಂದು ವಾದಿಸಿದ ಅವರು, ಆಡಳಿತಾರೂಢ ಡಿಎಂಕೆ ಪಕ್ಷವು ಕರೂರ್ ತನಿಖೆ ಮತ್ತು ಆರ್ಮ್‌ಸ್ಟ್ರಾಂಗ್ ವಿವಾದಗಳಂತಹ ಇತ್ತೀಚಿನ ಕಾನೂನು ಸೋಲುಗಳಿಂದ ಗಮನ ಬೇರೆಡೆಗೆ ಸೆಳೆಯಲು ಈ ಭಾಷಾ ವಿವಾದವನ್ನು ಎತ್ತಿಹಿಡಿಯುತ್ತಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ, ಫಾಕ್ಸ್‌ಕಾನ್‌ ಹೂಡಿಕೆ ವಿವಾದದಿಂದಲೂ ಗಮನ ಬೇರೆಡೆಗೆ ಸೆಳೆಯುವ ಯತ್ನವಿದೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ನೇತೃತ್ವದ ಸರ್ಕಾರವು 2025-26ರ ರಾಜ್ಯ ಬಜೆಟ್‌ನ ಲೋಗೋದಲ್ಲಿ ರಾಷ್ಟ್ರೀಯ ರೂಪಾಯಿ ಚಿಹ್ನೆಯನ್ನು ತಮಿಳಿನ (ರೂ) ಅಕ್ಷರದಿಂದ ಬದಲಾಯಿಸಿತ್ತು. ಈ ಕ್ರಮವು ಬಿಜೆಪಿ ನಾಯಕರು ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಟೀಕೆಗೆ ಗುರಿಯಾಗಿತ್ತು. ಆದರೆ, ಡಿಎಂಕೆ ಇದನ್ನು ತಮಿಳು ಭಾಷೆಯನ್ನು ಉತ್ತೇಜಿಸುವ ಪ್ರಯತ್ನವೆಂದು ಸಮರ್ಥಿಸಿಕೊಂಡಿತ್ತು, ರಾಷ್ಟ್ರೀಯ ಚಿಹ್ನೆಯನ್ನು ತಿರಸ್ಕರಿಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...