ಕಾವೇರಿ ನೀರು | ಹೆಚ್ಚುವರಿ ನೀರಿಗಾಗಿ ತಮಿಳುನಾಡಿನ ಬೇಡಿಕೆ ತಿರಸ್ಕರಿಸಿದ ಸಿಡಬ್ಲ್ಯುಆರ್‌ಸಿ

Date:

ತಮಿಳುನಾಡಿಗೆ ನೀಡಬೇಕಾದ 7.6 ಟಿಎಂಸಿ ಅಡಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಬೇಡಿಕೆಯನ್ನು ಸಿಡಬ್ಲ್ಯುಆರ್‌ಸಿ (ಕಾವೇರಿ ನೀರು ನಿಯಂತ್ರಣ ಸಮಿತಿ) ಸೋಮವಾರ ತಿರಸ್ಕರಿಸಿದೆ.

ಕಾವೇರಿ ಜಲವಿವಾದ ನ್ಯಾಯಮಂಡಳಿ (ಸಿಡಬ್ಲ್ಯೂಡಿಟಿ) ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ಸಿಡಬ್ಲ್ಯೂಆರ್‌ಸಿ ಸಭೆ ನಡೆದಿದೆ. ತಮಿಳುನಾಡು-ಕರ್ನಾಟಕವು ಅಂತಾರಾಜ್ಯ ಗಡಿಯಲ್ಲಿರುವ ಬಿಳಿಗುಂಡುಲುನಲ್ಲಿ ತಮಿಳುನಾಡಿಗೆ ಹರಿಯುವ ನೀರಿನ ಹರಿವನ್ನು ಖಚಿತಪಡಿಸಿಕೊಳ್ಳಬೇಕು. ಪ್ರತಿದಿನ 1,000 ನೀರನ್ನು ಮೇ ವರೆಗೆ ಬಿಡುಗಡೆ ಮಾಡಬೇಕು ಎಂದು ಕರ್ನಾಟಕಕ್ಕೆ ಸೂಚಿಸಿದೆ.

ಇದಕ್ಕಾಗಿ ಕರ್ನಾಟಕ ಕೆಆರ್‌ಎಸ್, ಕಬಿನಿ, ಹರಿಣಿ ಮತ್ತು ಹೇಮಾವತಿಯಿಂದ ನೀರು ಬಿಡಬೇಕಾಗಿಲ್ಲ ಎಂದು ಸಿಡಬ್ಲ್ಯೂಡಿಟಿ ಹೇಳಿದೆ. ಕರ್ನಾಟಕದ ನಾಲ್ಕು ಪ್ರಮುಖ ಅಣೆಕಟ್ಟುಗಳಲ್ಲಿ ಪ್ರಸ್ತುತ ಸುಮಾರು 37 ಟಿಎಂಸಿ ಅಡಿ ನೀರು ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಡವಾಗಿ ಬಿತ್ತನೆ ಮಾಡಿದ ಬೆಳೆಗಳಿಗೆ ರಾಜ್ಯಕ್ಕೆ ನೀರು ಬೇಕು ಎಂದು ತಮಿಳುನಾಡು ಅಧಿಕಾರಿಗಳು, ಒತ್ತಾಯಿಸಿದ್ದು, ಅದರ ಬೆಡಿಕೆಯನ್ನು ಸಮಿತಿ ತಿರಸ್ಕರಿಸಿದೆ.

“ತಮಿಳುನಾಡಿನಲ್ಲಿ ಬೆಳೆಗಳ ಕೊಯ್ಲು ಈಗಾಗಲೇ ಪ್ರಾರಂಭವಾಗಿದೆ. ಅಲ್ಲಿನ ನೀರಾವರಿಗಾಗಿ ಹೆಚ್ಚುವರಿ ನೀರು ಬಿಡುವ ಅಗತ್ಯವಿಲ್ಲ” ಎಂದು ಗುಪ್ತಾ ಅವರು ಹೇಳಿದ್ದಾರೆ.

“ತಮಿಳುನಾಡಿನ ಔಪಚಾರಿಕ ನೀರಾವರಿ ಅವಧಿಯು ಜನವರಿ 31ಕ್ಕೆ ಕೊನೆಗೊಂಡಿದೆ. ಬೆಳೆಗಳ ಕೊಯ್ಲು ಈಗಾಗಲೇ ಪ್ರಾರಂಭವಾಗಿದೆ. ಈಶಾನ್ಯ ಮಾನ್ಸೂನ್ ಮಳೆಯು ತಮಿಳುನಾಡಿನ ನೀರಿನ ಬೇಡಿಕೆಯನ್ನು ಕಡಿಮೆ ಮಾಡಿದೆ. ಆದರೆ, ಕರ್ನಾಟಕವು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರಗಾಲದ ಪರಿಸ್ಥಿತಿ ಎದುರಿಸುತ್ತಿದೆ” ಎಂದು ಸಮಿತಿ ಹೇಳಿದೆ.

ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶವು ನೈಋತ್ಯ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ. ಈ ಬಾರಿ ಮಾನ್ಸೂನ್‌ ಮಳೆ ಕೊರತೆಯಗಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯದ ಜಲಾನಯನ ಪ್ರದೇಶಗಳು ಈಶಾನ್ಯ ಮಾನ್ಸೂನ್ ಮಳೆಯಿಂದ ನೀರಿನ ಪ್ರಯೋಜನ ಪಡೆದಿವೆ” ಎಂದು ಸಮಿತಿ ಗಮನಿಸಿದೆ.

“ಜನವರಿ31ರ ನಂತರ ತಮಿಳುನಾಡಿಗೆ ಹೆಚ್ಚುವರಿ ನೀರಿನ ಅಗತ್ಯವಿಲ್ಲ. ಫೆಬ್ರವರಿಯಲ್ಲಿ ತಮಿಳುನಾಡಿನಲ್ಲಿ ಬೆಳೆಗಳ ಕೊಯ್ಲು ಪ್ರಾರಂಭವಾಗಲಿದೆ. ಆದರೆ, ಕರ್ನಾಟಕವು ನದಿಯ ಪರಿಸರದಲ್ಲಿ ಹರಿವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ” ಎಂದು ಅಧ್ಯಕ್ಷ ಗುಪ್ತಾ ಹೇಳಿದ್ದಾರೆ.

ಸಿಡಬ್ಲ್ಯುಆರ್‌ಸಿ ಮುಂದಿನ ಸಭೆಯನ್ನು ಮಾರ್ಚ್ 21ರಂದು ನಿಗದಿಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...