ತಮಿಳುನಾಡು | ಶಾಲಾ ವಾಹನಕ್ಕೆ ರೈಲು ಡಿಕ್ಕಿ; ಮೂವರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ

Date:

ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಲೂರು ನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಸೆಮ್ಮಂಕುಪ್ಪಂನಲ್ಲಿ ಶಾಲಾ ವಾಹನದಲ್ಲಿ ಮಕ್ಕಳು ಶಾಲೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಾಹನ ರೈಲು ಕ್ರಾಸಿಂಗ್ ಮೂಲಕ ಹಾದುಹೋದಾಗ ರೈಲ್ವೆ ಗೇಟ್ ಮುಚ್ಚಿರಲಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಪಘಾತ ನಡೆದ ಸಂದರ್ಭದಲ್ಲಿ ಗೇಟ್‌ಕೀಪರ್‌ ನಿದ್ರಿಸುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ ಎಂದು ಕೆಲವು ವರದಿಗಳು ಹೇಳುತ್ತವೆ.

ಇದನ್ನು ಓದಿದ್ದೀರಾ? ನಾಯಕನಾಗಿ ಅಭೂತಪೂರ್ವ ದಾಖಲೆ ನಿರ್ಮಿಸಿದ ಶುಭ್​ಮನ್ ಗಿಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಕೃಷ್ಣಸ್ವಾಮಿ ಶಾಲೆಗೆ ಸೇರಿದ ಶಾಲಾ ವಾಹನ ರೈಲ್ವೆ ಹಳಿಗಳಿಂದ ಸುಮಾರು 50 ಮೀಟರ್ ದೂರಕ್ಕೆ ಎಳೆದೊಯ್ದಿತ್ತು. ವಾಹನ ವಿಲ್ಲುಪುರಂ-ಮೈಲಾಡುತುರೈ ಪ್ಯಾಸೆಂಜರ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಬಗ್ಗೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

ಕಡಲೂರು ಜಿಲ್ಲಾಧಿಕಾರಿ ಸಿಬಿ ಆದಿತ್ಯ ಸೆಂಥಿಲ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಯಕುಮಾರ್ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗೇಟ್ ಕೀಪರ್ ಗೇಟ್‌ಗಳನ್ನು ಮುಚ್ಚದಿರುವುದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...