ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ತಮಿಳಿನ ‘ವಿಕಟನ್’ ವೆಬ್‌ಸೈಟ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

Date:

ಭಾರತೀಯರಿಗೆ ಕೈಕೋಳ ತೊಡಿಸಿ ಅಮೆರಿಕ ಗಡಿಪಾರು ಮಾಡಿದ ವಿಚಾರದಲ್ಲಿ ಮೌನವಾಗಿರುವ ಪ್ರಧಾನಿ ಮೋದಿ ಅವರನ್ನು ವ್ಯಂಗ್ಯಾತ್ಮಕವಾಗಿ ಚಿತ್ರಿಸಿ, ವ್ಯಂಗ್ಯಚಿತ್ರವನ್ನು ಪ್ರಕಟಿಸಿದ್ದ ತಮಿಳುನಾಡಿನ ಡಿಜಿಟಲ್ ಸುದ್ದಿ ಮಾಧ್ಯಮ ‘ವಿಕಟನ್’ ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಸ್ವತಃ ‘ವಿಕಟನ್’ ತಂಡ ಮಾಹಿತಿ ಹಂಚಿಕೊಂಡಿದ್ದು, “ನಮ್ಮ ವೆಬ್‌ಸೈಟ್‌ಅನ್ನು ಹಲವೆಡೆ ಹಲವರು ತೆರೆಯಲಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಬಳಿಕ, ಪರಿಶೀಲಿಸಿದಾಗ, ನಮ್ಮ ವೆಬ್‌ಸೈಟ್‌ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂಬುದು ಗೊತ್ತಾಯಿತು. ಆದರೆ, ಸರ್ಕಾರವು ನಮಗೆ ಯಾವುದೇ ಮಾಹಿತಿ ನೀಡಿಲ್ಲ” ಎಂದು ಹೇಳಿದೆ.

“ನಮ್ಮ ವೆಬ್‌ಸೈಟ್‌ಅನ್ನು ನಿರ್ಬಂಧಿಸುವುದಕ್ಕೂ ಮೊದಲು, ವಿಕಟನ್ ಆನ್‌ಲೈನ್ ನಿಯತಕಾಲಿಕೆ ‘ವಿಕಟನ್ ಪ್ಲಸ್’ನಲ್ಲಿ (ಫೆಬ್ರವರಿ 10) ‘ಭಾರತೀಯರನ್ನು ಅಮೆರಿಕದಿಂದ ಕೈಕೋಳ ಹಾಕಿ ವಾಪಸ್ ಕರೆತರಲಾಗುತ್ತಿದೆ ಮತ್ತು ಪ್ರಧಾನಿ ಮೋದಿ ಅದರ ಬಗ್ಗೆ ಮಾತನಾಡಿಲ್ಲ’ ಎಂಬ ಒಂದು ಕಾರ್ಟೂನ್ ಪ್ರಕಟಿಸಲಾಗಿತ್ತು. ಆ ಕಾರ್ಟೂನ್ ವಿರುದ್ಧ ಬಿಜೆಪಿಗರು ಸಿಟ್ಟಾಗಿದ್ದರು. ಬಿಜೆಪಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಅವರು ವಿಕಟನ್ ಕಂಪನಿಯ ವಿರುದ್ಧ ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಇದೀಗ, ಯಾವುದೇ ಮಾಹಿತಿಯನ್ನು ನೀಡದೆ, ವಿಕಟನ್ ವೆಬ್‌ಸೈಟ್ಅನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮೋದಿ ವ್ಯಂಗ್ಯಚಿತ್ರ, ತಮಿಳುನಾಡು, ವಿಕಟನ್, ಕೇಂದ್ರ ಸರ್ಕಾರ, Modi cartoon, Tamil Nadu, Vikatan, Union Government,

“ವಿಕಟನ್ – ಒಂದು ಶತಮಾನದಿಂದ, ನಿರಂತರವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸುವ ಮೂಲಕ ಕೆಲಸ ಮಾಡುತ್ತಿದೆ. ನಾವು ಯಾವಾಗಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವುದಕ್ಕಾಗಿ ಕೆಲಸ ಮಾಡಿದ್ದೇವೆ. ಮುಂದೆಯೂ ಮಾಡುತ್ತೇವೆ. ಆ ಕಾರ್ಟೂನ್‌ ಕಾರಣಕ್ಕಾಗಿ ಕೇಂದ್ರ ಸರ್ಕಾರವು ವೆಬ್‌ಸೈಟ್ ಅನ್ನು ನಿರ್ಬಂಧಿಸಿದ್ದರೆ, ನಾವು ಕಾನೂನು ಹೋರಾಟ ನಡೆಸುತ್ತೇವೆ” ಎಂದು ವಿಕಟನ್ ಸಂಸ್ಥೆ ಹೇಳಿದೆ.

ವಿಕಟನ್ ವೆಬ್‌ಸೈಟ್‌ಅನ್ನು ನಿರ್ಬಂಧಿಸಿರುವ ಕೇಂದ್ರದ ನಡೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಖಂಡಿಸಿದ್ದಾರೆ. “ವಿಕಟನ್ ಸುಮಾರು ಒಂದು ಶನಮಾನದಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಕಾರಣಕ್ಕಾಗಿ ಮಾಧ್ಯಮಗಳನ್ನು ನಿರ್ಬಂಧಿಸುವುದು ಸೂಕ್ತವಲ್ಲ. ಇದು ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ಸ್ವಭಾವಕ್ಕೆ ಮತ್ತೊಂದು ಉದಾಹರಣೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...