OYO ಹೋಟೆಲ್‌ನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

Date:

ಶಾಲಾ ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಮೃತದೇಹಗಳು ಉತ್ತರ ಪ್ರದೇಶದ ಅಲಿಗಢದ ಓಯೋ ಹೋಟೆಲ್‌ನಲ್ಲಿ ಪತ್ತೆಯಾಗಿವೆ. ಇಬ್ಬರೂ ವಿಷ ಸೇವಿಸಿ, ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೃತರನ್ನು 23 ವರ್ಷದ ಶಿಕ್ಷಕ ಚಂದ್ರಪ್ರಭ್ ಮತ್ತು 14 ವರ್ಷದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಬ್ಬರೂ ಪ್ರೀತಿಸುತ್ತಿದ್ದರು, ಊರು ತೊರೆದು ಹೋಗಿದ್ದರು ಎಂದು ವರದಿಯಾಗಿದೆ. ಆದಾಗ್ಯೂ, ಅವರ ಜೀವನವು ದುರಂತದಲ್ಲಿ ಅಂತ್ಯಗೊಂಡಿದ್ದು, ಇಬ್ಬರೂ ತಮ್ಮ ಜೀವ ಕಳೆದುಕೊಂಡಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಮೃತ ಶಿಕ್ಷಕ ಚಂದ್ರಪ್ರಭ್ ಅವರು ಜ್ವಾಲಾಜಿಪುರಂ ನಿವಾಸಿಯಾಗಿದ್ದು, ಖಾಸಗಿ ಶಾಲೆಯಲ್ಲಿ ಪಾಠ ಮಾಡುತ್ತಿದ್ದರು. ಅದೇ ಶಾಲೆಯಲ್ಲಿ ವಿದ್ಯಾರ್ಥಿನಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಕ ಟ್ಯೂಷನ್‌ ತರಗತಿಗಳನ್ನೂ ತೆಗೆದುಕೊಳ್ಳುತ್ತಿದ್ದರು. ಈ ವೇಳೆ, ಶಿಕ್ಷಕ ಮತ್ತು ವಿದ್ಯಾರ್ಥಿನಿ ನಡುವೆ ಪ್ರೇಮ ಬೆಳೆದಿತ್ತು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಕ ಮತ್ತು ವಿದ್ಯಾರ್ಥಿನಿಯ ಪ್ರೇಮ ಸಂಬಂಧದ ಬಗ್ಗೆ 3 ತಿಂಗಳ ಹಿಂದೆ ಕುಟುಂಬಗಳಿಗೆ ಗೊತ್ತಾಗಿತ್ತು. ಬಳಿಕ, ವಿದ್ಯಾರ್ಥಿನಿಯನ್ನು ಟ್ಯೂಷನ್‌ಗೆ ಕಳಿಸುವುದನ್ನು ಪೋಷಕರು ನಿಲ್ಲಿಸಿದ್ದರು. ಶಾಲೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಭೇಟಿಯಾಗದಂತೆ ತೆಡೆಯಲು ಎರಡೂ ಕುಟುಂಬಗಳು ಯತ್ನಿಸಿದ್ದವು. ಆದರೂ, ಅವರು ರಹಸ್ಯವಾಗಿ ಭೇಟಿ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಮೇ 5ರ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಪೊಲೀಸರಿಗೆ 112 ತುರ್ತು ಸಂಖ್ಯೆಗೆ ಕರೆ ಬಂದಿತು. ಖೇರೇಶ್ವರ ಪೊಲೀಸ್ ಠಾಣೆಯ ಪೊಲೀಸರು ಓಯೋ ಹೋಟೆಲ್‌ಗೆ ತೆರಳಿ, ಪರಿಶೀಲಿಸಿದಾಗ, ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಹೋಟೆಲ್ ಕೊಠಡಿಯಲ್ಲಿ ವಿಷದ ಖಾಲಿ ಬಾಟಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿ ಸೊಮವಾರ ಬೆಳಿಗ್ಗೆ ಶಾಲೆಗೆ ಹೋಗಿದ್ದಳು. ಆಕೆಯನ್ನು ಶಿಕ್ಷಕ ಹೋಟೆಲ್‌ಗೆ ಕರೆದೊಯ್ದಿದ್ದಾನೆ. ಇಬ್ಬರೂ ಹೋಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...