ಕಪಾಳಕ್ಕೆ ಹೊಡೆದ ಶಿಕ್ಷಕಿ; ಮೆದುಳು ಗಾಯಗೊಂಡು 9 ವರ್ಷದ ಬಾಲಕಿ ಸಾವು

Date:

ಟ್ಯೂಷನ್‌ನಲ್ಲಿ ಶಿಕ್ಷಕಿಯೊಬ್ಬರು ಕಪಾಳಕ್ಕೆ ಹೊಡೆದ ಪರಿಣಾಮ, ವಿದ್ಯಾರ್ಥಿನಿಯ ಮೆದುಳಿಗೆ ತೀವ್ರವಾಗಿ ಪೆಟ್ಟಾಗಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ಬಳಿಯ ನಲ್ಲಸೊಪಾರದಲ್ಲಿ ನಡೆದಿದೆ.

ಅಕ್ಟೋಬರ್ 5ರಂದು ಟ್ಯೂಷನ್‌ನಲ್ಲಿ 8 ವರ್ಷದ ಬಾಲಕಿ ದೀಪಿಕಾಗೆ ಶಿಕ್ಷಕಿ ಎರಡು ಬಾರಿ ಕಪಾಳಕ್ಕೆ ಹೊಡೆದಿದ್ದಾರೆ. ಕಿವಿಯ ಕೆಳಭಾಗಕ್ಕೆ ಪೆಟ್ಟು ಬಿದ್ದಿದ್ದರಿಂದ ಮೆದುಳಿಗೂ ಪೆಟ್ಟಾಗಿದೆ. ಬಳಿಕ, ಆಕೆಯ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಆಕೆಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೆ ಆಕೆ ಬುಧವಾರ ಸಾವನ್ನಪ್ಪಿದ್ದಾಳೆ.

ಪೊಲೀಸರ ಪ್ರಕಾರ, 20 ವರ್ಷದ ಖಾಸಗಿ ಟ್ಯೂಷನ್ ಶಿಕ್ಷಕಿ ರತ್ನಾ ಸಿಂಗ್ ಎಂಬಾಕೆ ಬಾಲಕಿಗೆ ಹೊಡೆದಿದ್ದಾಳೆ. ಬಾಲಕಿ ಟ್ಯೂಷನ್‌ ತರಗತಿಯಲ್ಲಿ ಚೇಷ್ಟೆ ಮಾಡುತ್ತಿದ್ದಳೆಂದು ಭಾವಿಸಿ, ಆಕೆಗೆ ಶಿಕ್ಷಕಿ ಹೊಡೆದಿದ್ದಾರೆ. ಆಕೆಯ ಹೊಡೆತ ಎಷ್ಟು ಗಟ್ಟಿಯಾಗಿತ್ತೆಂದರೆ, ಕಿವಿಯೋಲೆ ಬಾಲಕಿಯ ಕೆನ್ನೆಯೊಳಗೆ ಸಿಲುಕಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲಕಿಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರತರವಾದ ಮಿದುಳಿನ ಗಾಯ, ದವಡೆಯ ಬಿಗಿತ, ಶ್ವಾಸನಾಳ ಗಾಯ ಮತ್ತು ಧನುರ್ವಾಯು ಸೋಂಕಿನಿಂದಾಗಿ ಆಕೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ, ಆಕೆ ಬದುಕುಳಿಯಲಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವು ಶಿಕ್ಷಕಿಗೆ ನೋಟಿಸ್ ನೀಡಿದ್ದೇವೆ. ತನಿಖೆ ನಡೆಸಿ ವೈದ್ಯರ ವಿವರವಾದ ಅಭಿಪ್ರಾಯ ಪಡೆದು, ಚಾರ್ಜ್‌ಶೀಟ್ ಹಾಕುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...