ಮೆರವಣಿಗೆಯಲ್ಲಿ ಸಾಗುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗ

Date:

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಘಟನೆ ಪಂಜಾಬ್ – ಹರಿಯಾಣದ ಶಂಭು ಗಡಿಯಲ್ಲಿ ನಡೆದಿದೆ.

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿ ದೊಡ್ಡ ಪ್ರಮಾಣದ ಹೊಗೆ ಆವರಿಸುತ್ತಿದ್ದು,ಮಾಧ್ಯಮ ಪ್ರತಿನಿಧಿಗಳು ಒಳಗೊಂಡಂತೆ ನೂರಾರು ರೈತರು ಆಶ್ರುವಾಯುವಿನಿಂದ ಪಾರಾಗಲು ಓಡುತ್ತಿದ್ದಾರೆ.

ಇಂದು ಮಧ್ಯಾಹ್ನದ ಸುಮಾರಿನಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗುತ್ತಿದ್ದ ರೈತರ ಮೇಲೆ ಸುಮಾರು 20ಕ್ಕೂ ಹೆಚ್ಚು ಅಶ್ರುವಾಯುಗಳನ್ನು ಸಿಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಂಭು ಗಡಿಯು ದೆಹಲಿಯಿಂದ ಸುಮಾರು 200 ಕಿ.ಮೀ ದೂರದಲ್ಲಿದ್ದು, ನೂರಾರು ಸಂಖ್ಯೆಯಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಜಮಾಯಿಸಿದ್ದಾರೆ. ರೈತರನ್ನು ಚದುರಿಸಲು ಡ್ರೋನ್‌ಗಳ ಮೂಲಕ ಅಶ್ರುವಾಯುಗಳನ್ನು ಪ್ರಯೋಗಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಸುಮಾರು 200ಕ್ಕೂ ಹೆಚ್ಚು ರೈತ ಸಂಘಟನೆಗಳಿಂದ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ಒಂದು ಲಕ್ಷಕ್ಕೂ ಹೆಚ್ಚು ಮಂದಿ ರೈತರು ರಾಷ್ಟ್ರ ರಾಜಧಾನಿಯತ್ತ ಇಂದು ಬೆಳಗಿನಿಂದ ಸಾಗುತ್ತಿದ್ದಾರೆ.

ಪೊಲೀಸರ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಟನಾ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. ರೈತರ ದಾರಿಗೆ ಚೂಪಾದ ಕಬ್ಬಿಣದ ಸಲಾಕೆಗಳನ್ನು ಇಡುವುದು ಅಮೃತ ಕಾಲ ಅಥವಾ ಅನ್ಯಾಯಕಾಲವೆ? ಪ್ರಧಾನಿಯವರೆ ದೇಶದ ರೈತರೊಂದಿಗೆ ಏಕೆ ಈ ರೀತಿ ವರ್ತಿಸುತ್ತಿದ್ದೀರಿ? ಏಕೆ ಅವರ ಭರವಸೆಗಳನ್ನು ಈಡೇರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ರೈತ ಸಂಘಗಳು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲಿನ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ತೆರಳುತ್ತಿವೆ. ರೈತರು ದೆಹಲಿ ಪ್ರವೇಶಿಸದಂತೆ ಪೊಲೀಸರು ಕಾಂಕ್ರೀಟ್ ತಡೆ, ಬ್ಯಾರಿಕೇಡ್ ಮತ್ತು ಮುಳ್ಳುತಂತಿಗಳನ್ನು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...