ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

Date:

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆಸಿ 14 ವರ್ಷದ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಬಾಲಕಿ ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್‌ ಹೌಸ್ ಒಂದಕ್ಕೆ ಹೋಗಿದ್ದಳು. ಆದರೆ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಬಂದು ತನ್ನ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಳ್ಳಾರಿ| 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತನ್ನ ಮಗಳು ತನ್ನ ಸ್ನೇಹಿತ ಅಂಶು ಜೊತೆ ಮತ್ತೊಬ್ಬ ಯುವಕನ (ಅವಿನಾಶ್) ಹುಟ್ಟುಹಬ್ಬ ಆಚರಿಸಲು ಬೈಕ್‌ನಲ್ಲಿ ಹೋಗಿದ್ದಳು ಎಂದು ಸಂತ್ರಸ್ತೆಯ ತಾಯಿ ತಮ್ಮ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಅವಿನಾಶ್ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ವಾಪಸ್ ಬರುವುದಾಗಿ ಅಂಶು ಹೇಳಿದ್ದ. ಆದರೆ ಅವಿನಾಶ್ ಗೆಸ್ಟ್‌ ಹೌಸ್‌ನಿಂದ ಹೊರ ಹೋಗಿದ್ದು, ಅಂಶು ತನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

“ಅವಿನಾಶ್ ಈ ಹಿಂದೆ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ತನ್ನ ಮಗಳು ಬಹಿರಂಗಪಡಿಸಿದ್ದಾಳೆ” ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕ

ತಾಯಿಯ ದೂರಿನ ಆಧಾರದಲ್ಲಿ ಸೋಮವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ, “ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...