ಗೆಳತಿಯ ನಗ್ನ ವಿಡಿಯೋಗಳನ್ನು ಕದ್ದು ಕೀಟಲೆ ಮಾಡುತ್ತಿದ್ದ ಮಿತ್ರನನ್ನು ಕೊಂದ ಕಿಶೋರ

Date:

17 ವರ್ಷದ ಹುಡುಗನೊಬ್ಬ ತನ್ನ ಗೆಳತಿಯ ನಗ್ನ ಚಿತ್ರಗಳು ಮತ್ತು ವೀಡಿಯೊಗಳನ್ನು ಕದ್ದು ತನ್ನನ್ನು ಚುಡಾಯಿಸುತ್ತಿದ್ದ ಆಪ್ತ ಸ್ನೇಹಿತನನ್ನು ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಶನಿವಾರ ಉತ್ತರಪ್ರದೇಶದ ಮೇರಠ್‌ನಲ್ಲಿ ಜರುಗಿದೆ.

ಆರೋಪಿ ತನ್ನ ಅಪರಾಧ ಒಪ್ಪಿಕೊಂಡಿದ್ದು ಅವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “16 ವರ್ಷ ವಯಸ್ಸಿನ ಮೃತನು ಆರೋಪಿಯ ಗೆಳತಿಯ ಕೆಲವು ನಗ್ನ ಚಿತ್ರಗಳು ಮತ್ತು ವೀಡಿಯೊಗಳನ್ನು ಹೊಂದಿದ್ದ. ಸಂತ್ರಸ್ತೆಯ ಫೋನ್‌ನಿಂದ ಆ ವೀಡಿಯೊಗಳು ಮತ್ತು ಚಿತ್ರಗಳನ್ನು ಕದ್ದು ಆರೋಪಿಯನ್ನು ಕೀಟಲೆ ಮಾಡುತ್ತಿದ್ದ. ತನ್ನ ಗೆಳತಿಯ ಚಿತ್ರಗಳು ಮತ್ತು ವೀಡಿಯೊಗಳನ್ನು ಸಾರ್ವಜನಿಕಗೊಳಿಸುತ್ತಾನೆಂದು ಭಾವಿಸಿ ತನ್ನ ಸ್ನೇಹಿತನನ್ನು ಕೊಲ್ಲಲು ಯೋಜಿಸಿದ್ದ,” ಎಂದು ಮೇರಠ್ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಮತ್ತು ಆರೋಪಿ ಇಬ್ಬರೂ ಕ್ರಮವಾಗಿ 11 ಮತ್ತು 12 ನೇ ತರಗತಿಗಳಲ್ಲಿ ಓದುತ್ತಿರುವ ನೆರೆಹೊರೆಯವರಾಗಿದ್ದು, ಕೋಚಿಂಗ್ ಸೆಂಟರ್‌ನಲ್ಲಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ಒಟ್ಟಿಗೆ ತಯಾರಿ ನಡೆಸುತ್ತಿದ್ದರು. ಕೋಚಿಂಗ್ ಸೆಂಟರ್‌ಗೆ ಸ್ಕೂಟಿಯಲ್ಲಿ ಒಟ್ಟಿಗೆ ಹೋಗುತ್ತಿದ್ದರು” ಎಂದು ಅವರು ತಿಳಿಸಿದ್ದಾರೆ.

ಮೃತನು ನಗ್ನಚಿತ್ರಗಳು ಮತ್ತು ವಿಡಿಯೋಗಳನ್ನು ನನ್ನ ಫೋನಿನಿಂದ ತನ್ನ‌ ಫೋನಿಗೆ ವರ್ಗಾವಣೆ ಮಾಡಿಕೊಂಡು ಚುಡಾಯಿಸುತ್ತಿದ್ದ ಎಂದು ಆರೋಪಿ ಹೇಳಿದ್ದಾನೆ.

ಶನಿವಾರ ಇಬ್ಬರೂ ಕೋಚಿಂಗ್ ಕ್ಲಾಸ್‌ಗೆ ತೆರಳಿದ್ದರು. ಆದರೆ ಮೃತನು ಸಂಜೆಯಾದರೂ ಹಿಂತಿರುಗಲಿಲ್ಲವಾದ ಕಾರಣ ಅವನ ಪೋಷಕರು ಆರೋಪಿಯನ್ನು ವಿಚಾರಿಸಿದ್ದಾರೆ. ತನ್ನ ಸ್ನೇಹಿತ ಎಲ್ಲಿದ್ದಾನೆ ಎಂದು ತಿಳಿದಿಲ್ಲ ಎಂದು ಆರೋಪಿ ಹೇಳಿದ್ದಾನೆ. ಮೃತನ ಕುಟುಂಬವು ಮಗ ಕಾಣೆಯಾಗಿದ್ದಾನೆಂದು ದೂರು ದಾಖಲಿಸಿದೆ ಮತ್ತು ಆರೋಪಿಯನ್ನು ಶಂಕಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಫುಟ್ಬಾಲ್ ಪಂದ್ಯದ ದ್ವೇಷ; ವಿದ್ಯಾರ್ಥಿಗಳನ್ನು ಅಪಹರಣಗೈದು ಅರೆನಗ್ನಗೊಳಿಸಿ ಹಲ್ಲೆ; ಇಬ್ಬರ ಬಂಧನ

ಮೃತನು ತನ್ನ ಫೋನ್‌ನಲ್ಲಿ ತನ್ನ ಗೆಳತಿಯ ನಗ್ನ ಚಿತ್ರಗಳು ಮತ್ತು ವೀಡಿಯೊಗಳನ್ನು ಒಮ್ಮೆ ನೋಡಿದ್ದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಆ ನಂತರ ಅವುಗಳನ್ನು ತನ್ನ ಫೋನ್‌ಗೆ ವರ್ಗಾಯಿಸಿಕೊಂಡು ತನ್ನನ್ನು ಕೀಟಲೆ ಮಾಡಲು ಆರಂಭಿಸಿದ. ವೀಡಿಯೊಗಳನ್ನು ಇತರರಿಗೆ ವರ್ಗಾಯಿಸುತ್ತಾನೆ ಎಂಬ ಭಯದಿಂದ ಕೊಲ್ಲಲು ಯೋಚಿಸಿದ್ದಾನೆ ಎಂದು ಎಸ್‌ಪಿ ಹೇಳಿದರು.

ಆರೋಪಿಯು ತನ್ನ ಫೋನನ್ನು 8,000 ರೂ.ಗೆ ಮಾರಿದ್ದಾನೆ. ಅದಕ್ಕೆ‌ ಮುನ್ನ ಕೆಎಫ್‌ಸಿ ಔಟ್‌ಲೆಟ್‌ನಲ್ಲಿ ಗೆಳೆಯರಿಬ್ಬರೂ ತಿಂದು, ಮದ್ಯವನ್ನೂ ಖರೀದಿಸಿದ್ದಾರೆ. ವಾಪಸ್ ಬರುವಾಗ ಸಂಜೆ 5.30ರ ಸುಮಾರಿಗೆ ಕೊಳವೆ ಬಾವಿಯೊಂದರ ಬಳಿ ನಿಂತಿದ್ದಾರೆ. ಆರೋಪಿಯು ತನ್ನ ಬ್ಯಾಗ್‌ನಿಂದ ಸುತ್ತಿಗೆಯನ್ನು ಹೊರತೆಗೆದು ಗೆಳೆಯನನ್ನು ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು‌ ತಿಳಿಸಿದ್ದಾರೆ

ಪೊಲೀಸರು ಮೃತನ ಫೋನ್‌ನಿಂದ ಯಾವುದೇ ವಿಡಿಯೋಗಳನ್ನು ವಶಪಡಿಸಿಕೊಂಡಿಲ್ಲ. ಆರೋಪಿಯನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳನ್ನೂ ಸಂಗ್ರಹಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...