ಕಾಶಿ ದೇವಾಲಯದ ನಿರ್ಬಂಧಿತ ಸ್ಥಳದಲ್ಲಿ ಕಾಣಿಸಿಕೊಂಡ ಬಿಹಾರ ಮಾಜಿ ಸಚಿವ ತೇಜ್ ಪ್ರತಾಪ್: ತನಿಖೆಗೆ ಆದೇಶ

Date:

ಲಾಲು ಪ್ರಸಾದ್ ಯಾದವ್ ಅವರ ಪುತ್ರ ಮತ್ತು ಬಿಹಾರದ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಕಾಶಿ ದೇವಾಲಯದ ನಿರ್ಬಂಧಿತ ಸ್ಥಳದಲ್ಲಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಕಾಶಿ ವಿಶ್ವನಾಥ ದೇವಾಲಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.

ಕಾಶಿ ವಿಶ್ವನಾಥ ಕಾರಿಡಾರ್‌ನೊಳಗಿನ ಪ್ರದೇಶವಾಗಿದ್ದು, ಇಲ್ಲಿ ದೇವಾಲಯದ ಆವರಣವೂ ಇದೆ. ಈ ಪ್ರದೇಶದಲ್ಲಿ ಮೊಬೈಲ್ ಫೋನ್‌ಗಳ ಬಳಕೆಯನ್ನೂ ಮಾಡುವಂತಿಲ್ಲ. ಆದರೆ ಈ ನಿರ್ಬಂಧಿತ ಪ್ರದೇಶದಲ್ಲಿ ತೇಜ್ ಪ್ರತಾಪ್ ಇರುವ ವಿಡಿಯೋ ಗುರುವಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಶಾಸಕ ತೇಜ್ ಪ್ರತಾಪ್ ಯಾದವ್ ಆಜ್ಞೆಯಂತೆ ಕುಣಿದ ಕಾನ್‌ಸ್ಟೆಬಲ್ ಅಮಾನತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವಭೂಷಣ್ ಮಿಶ್ರಾ, “ಇತ್ತೀಚೆಗೆ ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ವಿವಿಧ ಪತ್ರಿಕೆಗಳ ಮೂಲಕ ದೇವಾಲಯ ಆಡಳಿತ ಮಂಡಳಿಗೆ ಈ ವಿಡಿಯೋ ಬಗ್ಗೆ ತಿಳಿದುಬಂದಿದೆ” ಎಂದಿದ್ದಾರೆ.

ಹಾಗೆಯೇ ಈ ಬಗ್ಗೆ ದೇವಾಲಯದ ಭದ್ರತೆ ಜವಾಬ್ದಾರಿ ಹೊಂದಿರುವ ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. “ಈ ವಿಷಯದ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಮತ್ತು ಸಂಬಂಧಪಟ್ಟ ಸಂಸ್ಥೆಯ ಜವಾಬ್ದಾರಿಯುತ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಮತ್ತು ಸ್ಥಳೀಯ ಪೊಲೀಸ್ ಆಡಳಿತಕ್ಕೆ ಮಾಹಿತಿಯನ್ನು ಕಳುಹಿಸಲಾಗಿದೆ” ಎಂದು ವಿಶ್ವಭೂಷಣ್ ಮಿಶ್ರಾ ಹೇಳಿದ್ದಾರೆ.

“ದೇವಾಲಯದ ಆವರಣದಲ್ಲಿ ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ನೋಡಿಕೊಳ್ಳಲು ಎರಡೂ ಸಂಸ್ಥೆಗಳನ್ನು ಕೋರಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದ ಯಾವುದೇ ಸಿಬ್ಬಂದಿಯನ್ನು ಗುರುತಿಸಲಾಗುತ್ತದೆ. ನಿಯಮಗಳ ಉಲ್ಲಂಘನೆ ಕಂಡುಬಂದರೆ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಮೇ 25ರಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರು ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...