ತೆಲಂಗಾಣ ರಾಜ್ಯಪಾಲೆ ರಾಜೀನಾಮೆ: ಲೋಕಸಭೆಗೆ ಸ್ಪರ್ಧೆ ಸಾಧ್ಯತೆ

Date:

ತೆಲಂಗಾಣ ರಾಜ್ಯಪಾಲೆ ಹಾಗೂ ಪುದುಚೆರಿಯ ಲೆಫ್ಟಿನೆಂಟ್‌ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದ ತಮಿಳ್‌ಸೆಲ್ವಿ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೌಂದರರಾಜನ್‌ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳಿಸಿಕೊಟ್ಟಿದ್ದಾರೆ ಎಂದು ರಾಜಭವನದ ವರದಿಗಳು ತಿಳಿಸಿವೆ.

ಸೌಂದರಿರಾಜನ್‌ ಅವರ ರಾಜೀನಾಮೆ ತಮಿಳುನಾಡು ಹಾಗೂ ಪುದಿಚೆರಿಯ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡು ದಿನ ಬಾಕಿಯಿರುವ ಸಂದರ್ಭದಲ್ಲಿಯೇ ರಾಜೀನಾಮೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮಿಳ್‌ಸೆಲ್ವಿ ಸೌಂದರರಾಜನ್ ಅವರು ಈ ಹಿಂದೆ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ದಕ್ಷಿಣ ಚೆನ್ನೈ ಅಥವಾ ತಿರುನೆಲ್ವೆಲಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

2019ರ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೌಂದರರಾಜನ್‌ ಅವರು ಡಿಎಂಕೆಯ ಹಿರಿಯ ನಾಯಕಿ ಕನಿಮೊಳಿ ಅವರ ವಿರುದ್ಧ ಭಾರಿ ಅಂತರದಿಂದ ಪರಾಭವಗೊಂಡಿದ್ದರು. ನಂತರದಲ್ಲಿ ಅವರನ್ನು ಅದೇ ವರ್ಷ ತೆಲಂಗಾಣ ರಾಜ್ಯಪಾಲರಾಗಿ ನೇಮಿಸಲಾಗಿತ್ತು.

2021ರ ಫೆಬ್ರವರಿಯಲ್ಲಿ ಕಿರಣ್‌ ಬೇಡಿ ರಾಜಿನಾಮೆ ನೀಡಿದ ಕಾರಣ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್‌ ಆಗಿ ಕೂಡ ಹೆಚ್ಚುವರಿ ಜವಾಬ್ದಾರಿ ನೀಡಲಾಯಿತು. ಕಳೆದ ಮೂರು ವರ್ಷಗಳಲ್ಲಿ ಸೌಂದರಿರಾಜನ್‌ ಅವರು ಹೈದರಾಬಾದ್‌ಗಿಂದ ಹೆಚ್ಚಾಗಿ ಪುದುಚೆರಿಯಲ್ಲಿಯೆ ಇರುತ್ತಿದ್ದರು.

ಸೌಂದರಿರಾಜನ್‌ ಅವರು ಹಿರಿಯ ಕಾಂಗ್ರೆಸ್ ನಾಯಕ ಕುಮರಿ ಅನಂತನ್‌ ಅವರ ಪುತ್ರಿಯಾಗಿದ್ದು, 1990ರಲ್ಲಿ ತಮ್ಮ ತಂದೆಯ ವಿರುದ್ಧವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದರು. 2014 ರಿಂದ 2019ರವರೆಗೆ ತಮಿಳುನಾಡಿನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು.

ರಾಜ್ಯಪಾಲರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದು ಮೊದಲೇನಲ್ಲ. ಮಿಜೋರಾಂ ರಾಜ್ಯಪಾಲರಾಗಿದ್ದ ಕುಮ್ಮರಮ್ ರಾಜಶೇಖರನ್‌ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ 2019ರಲ್ಲಿ ತಿರುವನಂತಪುರಂನಿಂದ ಶಶಿ ತರೂರ್‌ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...