ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸಿದ ತೆಲಂಗಾಣ ಸರ್ಕಾರ

Date:

ತೆಲಂಗಾಣ ಕಾಂಗ್ರೆಸ್ ಸರ್ಕಾರ ಸೋಮವಾರ ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಜಾರಿಗೊಳಿಸಿದೆ. ಒಳಮೀಸಲಾತಿಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ. “ತೆಲಂಗಾಣವು ಎಸ್‌ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎನಿಸಿಕೊಂಡಿದೆ” ಎಂದು ನೀರಾವರಿ ಸಚಿವ ಎನ್‌ ಉತ್ತಮ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣ ಸರ್ಕಾರವು ಒಳಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಲ್ತರ್‌ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ ಒಟ್ಟು 59 ಉಪಜಾತಿಗಳಿದೆ. ಜನಸಂಖ್ಯೆ, ಹಿಂದುಳಿದುರುವ ಆಧಾರದಲ್ಲಿ ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡುವಂತೆ ಸಮಿತಿ ಶಿಫಾರಸು ನೀಡಿತ್ತು.

ಇದನ್ನು ಓದಿದ್ದೀರಾ? ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ ಮೀಸಲಾತಿಯ ಉದ್ದೇಶವೇ ವಿಫಲ: ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ ತೆಲಂಗಾಣದಲ್ಲಿ ಎಸ್‌ಸಿಯಲ್ಲಿ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಒಟ್ಟು ಶೇಕಡ 15ರಷ್ಟು ಮೀಸಲಾತಿಯ ಪೈಕಿ ಮೊದಲ ವಿಭಾಗಕ್ಕೆ ಶೇಕಡ 1ರಷ್ಟು, ಎರಡನೇ ವಿಭಾಗಕ್ಕೆ ಶೇಕಡ 9ರಷ್ಟು, ಮೂರನೇ ವಿಭಾಗಕ್ಕೆ ಶೇಕಡ 5ರಷ್ಟು ಮೀಸಲಾತಿ ಲಭಿಸಲಿದೆ. ಮೊದಲ ವಿಭಾಗದಲ್ಲಿ 15, ಎರಡನೇ ವಿಭಾಗದಲ್ಲಿ 18 ಮತ್ತು ಮೂರನೇ ವಿಭಾಗದಲ್ಲಿ 26 ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ಜಾತಿಗಳನ್ನು ವರ್ಗೀಕರಿಸಲಾಗಿದೆ.

ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿ ತರ್ಕಬದ್ಧಗೊಳಿಸುವಿಕೆ) ಕಾಯ್ದೆ- 2025ಕ್ಕೆ ರಾಜ್ಯಪಾಲರು ಏಪ್ರಿಲ್ 8ರಂದು ಸಹಿತ ಹಾಕಿದ್ದಾರೆ. ಏಪ್ರಿಲ್ 14ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ತೆಲಂಗಾಣವು ಎಸ್‌ಸಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕ್ರಾಂತಿಕಾರಿ ನಿರ್ಧಾರವನ್ನು ತೆಗೆದುಕೊಂಡ ಮೊದಲ ರಾಜ್ಯವಾಗಿದೆ. ಈ ಇತಿಹಾಸ ಸೃಷ್ಟಿಯ ಭಾಗವಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ. ಬಾಬಾಸಾಹೇಬ್ ಡಾ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಪವಿತ್ರ ದಿನವೇ ನಾವು ಒಳಮೀಸಲಾತಿ ಜಾರಿ ಮಾಡಿದ್ದೇವೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...