ತೆಲಂಗಾಣ | ಕಾಂಗ್ರೆಸ್ ಸರ್ಕಾರ ರಚಿಸುವ ಮೂಲಕ ಸೋನಿಯಾ ಗಾಂಧಿ ಅವರಿಗೆ ‘ಬರ್ತ್‌ ಡೇ ಗಿಫ್ಟ್’: ಕೋಮಟಿ ರೆಡ್ಡಿ

Date:

2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸುತ್ತಿದ್ದು, ಇನ್ನೂ ಮತ ಎಣಿಕೆ ನಡೆಯುತ್ತಿದೆ. ಈ ನಡುವೆ, ಮುಖ್ಯಮಂತ್ರಿ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆಗಳು ಬಿರುಸು ಪಡೆದಿವೆ. ಸದ್ಯ ಸಿಎಂ ರೇಸಿನಲ್ಲಿ ಕೋಮಟಿ ರೆಡ್ಡಿ ವೆಂಕಟರೆಡ್ಡಿ, ಭಟ್ಟಿ ವಿಕ್ರಮಾರ್ಕ, ಸೀತಕ್ಕ ಹಾಗೂ ರೇವಂತ್ ರೆಡ್ಡಿ ಇದ್ದು, ಕಾಂಗ್ರೆಸ್‌ ಹೈಕಮಾಂಡ್ ಯಾರ ಕೈ ಹಿಡಿಯಲಿದ್ದಾರೆ ಎಂದು ಕಾದು ನೋಡಬೇಕಿದೆ.

ಈ ನಡುವೆ ರಾಜಕೀಯ ಬೆಳವಣಿಗೆ ನಡೆಯುತ್ತಿದ್ದು, “ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಸೋನಿಯಾ ಗಾಂಧಿ ನಿರ್ಧಾರ ಮಾಡುತ್ತಾರೆ. ಮೊದಲ ಆರು ತಿಂಗಳಲ್ಲೇ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಡಿಸೆಂಬರ್ 9ರಂದು ಸೋನಿಯಾ ಹುಟ್ಟುಹಬ್ಬವಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ಮೂಲಕ ಸೋನಿಯಾ ಗಾಂಧಿ ಅವರಿಗೆ ‘ಬರ್ತ್‌ ಡೇ ಗಿಫ್ಟ್’ ನೀಡುತ್ತೇವೆ” ಎಂದು ಕಾಂಗ್ರೆಸ್ ಮುಖಂಡ ಕೋಮಟಿ ರೆಡ್ಡಿ ವೆಂಕಟರೆಡ್ಡಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಚಾರ್ಮಿನಾರ್ ಕ್ಷೇತ್ರದ ಓವೈಸಿ ಪಕ್ಷದ ಅಭ್ಯರ್ಥಿ ಜುಲ್ಫಿಕರ್ ಅಲಿ ಗೆಲುವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುಂದಿದೆ. ಈ ನಡುವೆ, ಡಿಜಿಪಿ ಅಂಜನಿ ಕುಮಾರ್, ಮಹೇಶ್ ಭಾಗವತ್ ಹಾಗೂ ಸಂಜಯ್ ಕುಮಾರ್ ಜೈನ್ ಅವರು ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಿಎಂ ಆಕಾಂಕ್ಷಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿ, ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.

ರೇವಂತ್ ರೆಡ್ಡಿ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೋಮಟಿ ರೆಡ್ಡಿ ವೆಂಕಟರೆಡ್ಡಿ “ಸಿಎಂ ಅಭ್ಯರ್ಥಿ ಬಗ್ಗೆ ಎಲ್ಲ ಶಾಸಕರು ತೀರ್ಮಾನ ಕೈಗೊಳ್ಳುತ್ತಾರೆ. ರೇವಂತ್ ರೆಡ್ಡಿ ಪಕ್ಷದ ಅಧ್ಯಕ್ಷರಾಗಿದ್ದರಿಂದ ಡಿಜಿಪಿ ಭೇಟಿ ಮಾಡಿದ್ದಾರೆ, ಅಷ್ಟೇ” ಎಂದರು.

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರಿದಿದೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಮುನ್ನಡೆಯಲ್ಲಿದ್ದಾರೆ. 8 ಸುತ್ತುಗಳ ಅಂತ್ಯಕ್ಕೆ ರೇವಂತ್ ರೆಡ್ಡಿ 26,437 ಮತಗಳನ್ನು ಪಡೆದರೆ, ಸಿಎಂ ಕೆಸಿಆರ್ 24,091 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 23,802 ಮತ ಪಡೆದಿದ್ದಾರೆ. ಇದರೊಂದಿಗೆ ರೇವಂತ್ ರೆಡ್ಡಿ 2346 ಮತಗಳ ಮುನ್ನಡೆ ಸಾಧಿಸಿದ್ದಾರೆ.

ರೇವಂತ್ ರೆಡ್ಡಿ ಗೆಲುವು

ಕೊಡಂಗಲ್‌ನಲ್ಲಿ ರೇವಂತ್ ರೆಡ್ಡಿ ಗೆದ್ದಿದ್ದಾರೆ. ಬಿಆರ್‌ಎಸ್ ಅಭ್ಯರ್ಥಿ ಪಟ್ನಂ ನರೇಂದ್ರ ರೆಡ್ಡಿ ವಿರುದ್ಧ 32,800 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತಮ್ ಕುಮಾರ್ ರೆಡ್ಡಿ ಗೆಲುವು

ಹುಜೂರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉತ್ತಮ್ ಕುಮಾರ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬಿಆರ್‌ಎಸ್ ಅಭ್ಯರ್ಥಿ ವಿರುದ್ಧ ಅವರು ಜಯಗಳಿಸಿದ್ದಾರೆ.

ಮೇಡಕ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೈನಂಪಲ್ಲಿ ರೋಹಿತ್ ಬಿಆರ್ ಎಸ್ ಅಭ್ಯರ್ಥಿ ಪದ್ಮಾದೇವೇಂದ್ರ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ.

ಅಂಬರ್‌ಪೇಟೆಯಲ್ಲಿ ಬಿಆರ್‌ಎಸ್ ಅಭ್ಯರ್ಥಿ ಕಾಳೇರು ವೆಂಕಟೇಶ್ ಗೆಲುವು ಸಾಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...