‘ಪಕ್ಷದ ನಾಯಕತ್ವಕ್ಕೆ ಎತ್ತಿನ ಹಿಂಭಾಗದಲ್ಲಿ ಒದ್ದಂತೆ ಒದೆಯಬೇಕು’ ಎಂದ ತೆಲಂಗಾಣ ಬಿಜೆಪಿ ಮುಖಂಡ; ವಿಡಿಯೋ ವೈರಲ್

Date:

ತೆಲಂಗಾಣದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಲೋಕಸಭಾ ಸದಸ್ಯ ಎ ಪಿ ಜಿತೇಂದರ್ ರೆಡ್ಡಿ ಅವರ ಟ್ವೀಟ್‌ವೊಂದು ವಿವಾದಕ್ಕೆ ಗುರಿಯಾಗಿದೆ. ಟ್ರಕ್ ಹತ್ತಲು ಮೊಂಡು ಹಿಡಿದ ಕಾಡು ಎತ್ತಿನ ಹಿಂಭಾಗಕ್ಕೆ ವ್ಯಕ್ತಿಯೊಬ್ಬರು ಒದೆಯುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ವಿಡಿಯೋ ಈಗ ವೈರಲ್ ಆಗಿದೆ.

‘ಈ ಚಿಕಿತ್ಸೆಯು ತೆಲಂಗಾಣ ಬಿಜೆಪಿ ನಾಯಕತ್ವಕ್ಕೆ ಅಗತ್ಯವಾಗಿದೆ” ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೂ ಆದ ಜಿತೇಂದರ್ ರೆಡ್ಡಿ ಟ್ವೀಟ್ ಮಾಡಿದ್ದಾರೆ. ಅದನ್ನು ಪಕ್ಷದ ಹಿರಿಯ ಮುಖಂಡರಾದ ಅಮಿತ್ ಶಾ, ಸುನಿಲ್ ಬನ್ಸಾಲ್, ಬಿ ಎಲ್ ಸಂತೋಷ್ ಮತ್ತು ಪಕ್ಷದ ಪ್ರಧಾನ ಕಚೇರಿಗೆ ಟ್ಯಾಗ್ ಮಾಡಿದ್ದಾರೆ.

ತೆಲಂಗಾಣ ಬಿಜೆಪಿಯ ಹಿರಿಯ ನಾಯಕರಾದ ಈಟೆಲ ರಾಜೇಂದರ್ ಮತ್ತು ಕೋಮಟಿರೆಡ್ಡಿ ರಾಜ್‌ಗೋಪಾಲ್ ಅವರು ಕೂಡ ತಮ್ಮ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲಂಗಾಣದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಬಗ್ಗೆ ಪಕ್ಷದ ಕೆಲವು ನಾಯಕರೇ ತಿರುಗಿಬಿದ್ದಿದ್ದಾರೆ. ನಾಯಕತ್ವ ಬದಲಾವಣೆಗೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಜಿತೇಂದರ್ ರೆಡ್ಡಿ ಕೂಡ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ: ತೀಸ್ತಾ ಸೆಟಲ್ವಾಡ್‌ಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್; ತಕ್ಷಣವೇ ಶರಣಾಗುವಂತೆ ಸೂಚನೆ

ಜಿತೇಂದರ್ ರೆಡ್ಡಿ ಅವರ ಟ್ವೀಟ್ ಸೇರಿದಂತೆ ಕಳೆದ ಕೆಲವು ದಿನಗಳಲ್ಲಿ ತೆಲಂಗಾಣ ಬಿಜೆಪಿ ನಾಯಕರು ನೀಡಿರುವ ಕೆಲವು ಹೇಳಿಕೆಗಳು ಪಕ್ಷದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿವೆ. “ಈ ರೀತಿಯ ಅಶಿಸ್ತು ನಮ್ಮ ಪಕ್ಷದಲ್ಲಿ ಸ್ವೀಕಾರಾರ್ಹವಲ್ಲ” ಎಂದು ಪಕ್ಷವು ಎಚ್ಚರಿಸಿದೆ.

ಆದರೆ, ತಮ್ಮ ಟ್ವೀಟ್ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೆ ಉಲ್ಟಾ ಹೊಡೆದಿರುವ ಜಿತೇಂದರ್ ರೆಡ್ಡಿ, ‘ಬಂಡಿ ಸಂಜಯ್ ಅವರ ನಾಯಕತ್ವನ್ನು ಪ್ರಶ್ನಿಸುತ್ತಿರುವವರಿಗೆ ಯಾವ ಬಗೆಯ ಟ್ರೀಟ್‌ಮೆಂಟ್ ಕೊಡಬೇಕು ಎನ್ನುವ ಅರ್ಥದಲ್ಲಿ ತಾನು ಟ್ವೀಟ್ ಮಾಡಿದ್ದು, ತಮ್ಮ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...