ತೆಲಂಗಾಣ | ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಬಂಧನ

Date:

  • ಕರೀಮ್‌ನಗರದ ನಿವಾಸದಲ್ಲಿ ಸಂಜಯ್ ಕುಮಾರ್ ಬಂಧನ
  • ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಮಂಗಳವಾರ (ಏಪ್ರಿಲ್ 4) ತಡರಾತ್ರಿ ಬಂಧಿಸಿದ್ದಾರೆ.

10ನೇ ತರಗತಿಯ ಹಿಂದಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪೊಲೀಸರು ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದಲ್ಲಿ ಹತ್ತನೇ ತರಗತಿಯ ಹಿಂದಿ ಭಾಷೆಯ ಪರೀಕ್ಷೆ ಮಂಗಳವಾರ ಬೆಳಿಗ್ಗೆ 9.30ಕ್ಕೆ ಆರಂಭವಾಯಿತು. ಆದರೆ 10 ಗಂಟೆ ವೇಳೆಗಾಗಲೇ ವಾರಂಗಲ್ ಜಿಲ್ಲೆಯಲ್ಲಿ ವಾಟ್ಸಾಪ್ ಗುಂಪುಗಳಲ್ಲಿ ಪ್ರಶ್ನೆಪತ್ರಿಕೆ ಪ್ರತಿಗಳು ಹರಿದಾಡಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಇತರ ಜಿಲ್ಲೆಗಳಿಗೂ ಪ್ರಶ್ನೆಪತ್ರಿಕೆ ಪ್ರತಿ ಹರಿದಾಡಿತು. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಏಪ್ರಿಲ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್‌ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲನ್ನು ಉದ್ಘಾಟಿಸುವ ಜೊತೆಗೆ ನಾನಾ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮೊದಲೇ ಸಂಜಯ್ ಕುಮಾರ್ ಅವರ ಬಂಧನವಾಗಿದೆ.

ಪ್ರಧಾನಿ ಮೋದಿ ಭೇಟಿಗೂ ಮೊದಲೇ ಬಂಧಿಸಲಾಗಿದೆ. ಪ್ರಧಾನಿ ಭೇಟಿಗೆ ತಡೆ ನೀಡಲು ಆಡಳಿತ ಪಕ್ಷ ಬಿಆರ್‌ಎಸ್‌ ಹೀಗೆ ಮಾಡಿದೆ ಎಂದು ಸಂಜಯ್ ಕುಮಾರ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಬಂಧನದ ವಿಡಿಯೊಗಳನ್ನು ಬಂಡಿ ಸಂಜಯ್ ಕುಮಾರ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಂಡಿ ಸಂಜಯ್ ಕುಮಾರ್ ಬಂಧನದ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅವರನ್ನು ನಲಗೊಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್‌ ಅವರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಕಿಡಿಕಾರಿದ್ದಾರೆ.

“ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಬಿಆರ್‌ಎಸ್‌ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವುದಕ್ಕೆ ಈ ರೀತಿ ಮಾಡಲಾಗಿದೆ. ಇದೆಲ್ಲವೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ” ಎಂದು ಪ್ರೇಮೇಂದ್ರ ರೆಡ್ಡಿ ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಅರುಣಾಚಲ ಪ್ರದೇಶ ಸ್ಥಳಗಳಿಗೆ ಹೊಸ ಹೆಸರಿಟ್ಟ ಚೀನಾ; ಟೀಕಿಸಿ ಸುಮ್ಮನಾದ ಭಾರತ

ಕಳೆದ ತಿಂಗಳು ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ (ಟಿಎಸ್‌ಪಿಎಸ್‌ಸಿ) ಪ್ರಶ್ನೆ ಪತ್ರಿಕೆಯನ್ನು ಉದ್ಯೋಗಿಯೊಬ್ಬರು ಸೋರಿಕೆ ಮಾಡಿದ ನಂತರ ಬಂಡಿ ಸಂಜಯ್‌ ಕುಮಾರ್‌ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದರು.

ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದೆ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಸಂಬಂಧಿಗಳ ಕೈವಾಡವಿದೆ ಎಂದು ಸಂಜಯ್ ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...