ತೆಲಂಗಾಣ | ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

Date:

ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದಕ್ಕಾಗಿ, ವಿಚಲಿತಗೊಂಡ ಅಪರಾಧಿಯೊಬ್ಬ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಇದೇ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿರುವ ಎರಡನೇ ಘಟನೆ ಇದಾಗಿದೆ.

ಕೊಲೆ ಯತ್ನ ಪ್ರಕರಣದ ಅಪರಾಧಿ ಸರ್ದಾರ್ ಶ್ಯಾಮ್ ಕುರ್ತಿ ಅಲಿಯಾಸ್ ಕಾಮ್ ಸಿಂಗ್ ಎಂಬಾತ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ.

ಪ್ರಕರಣದ ವಿಚಾರಣೆ ನಡೆದು, ಅಂತಿಮ ತೀರ್ಪು ಪ್ರಕಟಿಸುವಾಗ ಅಪರಾಧಿಯನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿತ್ತು. ಅಪರಾಧಿ ಶ್ಯಾಮ್‌ ಕುರ್ತಿ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ತನಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರಿಂದ ಕೋಮಗೊಂಡ ಶ್ಯಾಮ್‌ ಕುರ್ತಿ, ಏಕಾಏಕಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಿಂದಾಗಿ ನ್ಯಾಯಾಲಯದ ಆವರಣದಲ್ಲಿ ಗದ್ದಲ ಉಂಟಾಗಿತ್ತು. ಅಪರಾಧಿಯನ್ನು ತಕ್ಷಣವೇ ಹಿಡಿದ ಪೊಲೀಸರು ಪೊಲೀಸ್ ಠಾಣೆಗೆ ಎಳೆದೊಯ್ದಿದ್ದಾರೆ. ಜಗದ್ಗಿರಿಗುಟ್ಟ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ, ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ಕರಣ್ ಸಿಂಗ್‌ ಎಂಬಾತ ಕೂಡ ತನಗೆ ಜೀವಾವಧಿ ಶಿಕ್ಷೆಗೆ ವಿಧಿಸಿದ್ದಕ್ಕಾಗಿ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...