ತೆಲಂಗಾಣ | ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ರೈತನನ್ನು 2 ಕಿ.ಮಿ ಹೊತ್ತು ಜೀವ ಉಳಿಸಿದ ಪೊಲೀಸ್

Date:

ಪೊಲೀಸರು ಕಾನೂನು ಪಾಲನೆ ಮಾತ್ರವಲ್ಲದೆ ಸಾಮಾಜಿಕ ಸೇವೆಯನ್ನು ಕೈಗೊಳ್ಳುತ್ತಾರೆ ಎಂಬುದಕ್ಕೆ ಈ ಪ್ರತ್ಯಕ್ಷ ಘಟನೆ ಸಾಕ್ಷಿಯಾಗಿದೆ. ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ರೈತರೊಬ್ಬರನ್ನು ಕಾನ್ಸ್‌ಟೇಬಲ್‌ ಒಬ್ಬರು ತನ್ನ ಭುಜದ ಮೇಲೆ 2 ಕಿ.ಮೀ ಹೊತ್ತು ಪ್ರಾಣ ಉಳಿಸಿದ್ದಾರೆ. ಈ ಘಟನೆಯು ತೆಲಂಗಾಣ ಕರೀಮ್‌ ನಗರದ ವೀನಾವನಕ ಮಂಡಲ್‌ನ ಬೇತಿಗಲ್‌ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಉಂಟಾದ ಜಗಳದಿಂದಾಗಿ ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೀಟನಾಶಕ ಸೇವಿಸಿ ಹೊರಳಾಡುತ್ತಿದ್ದರು. ರೈತನ ಪರಿಸ್ಥಿಯನ್ನು ಗಮನಿಸಿದ ಹತ್ತಿರದಲ್ಲಿದ್ದ ಇತರ ರೈತರು ಆರೋಗ್ಯ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆಂಧ್ರ ಪ್ರದೇಶ | ವಿಧಾನಸಭೆಯಿಂದ 8 ಶಾಸಕರು ಅನರ್ಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಕಷ್ಟದ ತುರ್ತು ಕರೆಗೆ ಪ್ರತಿಕ್ರಿಯೆ ನೀಡಿ ಆಗಮಿಸಿದ ಕಾನ್ಸ್‌ಟೇಬಲ್ ಜಯ್‌ಪಾಲ್ ಅವರು ಹೊಲದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದ ರೈತನನ್ನು ಗಮನಿಸಿದರು. ಯಾವುದೇ ಹಿಂಜರಿಕೆಯಿಲ್ಲದೆ ಜಯಪಾಲ್‌ ಅವರು ತನ್ನ ಭುಜದ ಮೇಲೆ ರೈತನನ್ನು ಹೊತ್ತು ಹೊಲಗಳ ಕಾಲುದಾರಿಗಳ ನಡುವೆಯೆ ಎರಡು ಕಿ.ಮೀ ಸಾಗಿದರು.

ಜಯ್‌ಪಾಲ್‌ ರೈತನನ್ನು ಸುರಕ್ಷಿತವಾಗಿ ಸ್ಥಳೀಯ ಜಮ್ಮಿಕುಂಟ ಆಸ್ಪತ್ರೆಗೆ ದಾಖಲಿಸಿದರು. ಸಮಯಕ್ಕೆ ಸರಿಯಾಗಿ ರೈತನನ್ನು ದಾಖಲಿಸಿದ ಕಾರಣ ವೈದ್ಯರು ತುರ್ತು ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ತುರ್ತು ಸಮಯದಲ್ಲಿ ರೈತನ ಪ್ರಾಣ ಉಳಿಸಿದ್ದಕ್ಕೆ ಜಯಪಾಲ್‌ ಅವರನ್ನು ಸ್ಥಳೀಯ ಜನಪ್ರತಿನಿಧಿಗಳು, ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...