ತೆಲಂಗಾಣ | ಮೇಕೆ ಕಳವು ಶಂಕೆ; ದಲಿತ ವ್ಯಕ್ತಿಯ ತಲೆಕೆಳಕಾಗಿ ನೇತು ಹಾಕಿ ಅಮಾನುಷ ಹಲ್ಲೆ

Date:

ಮೇಕೆಯೊಂದನ್ನು ಕಳವು ಮಾಡಲಾಗಿದೆ ಎಂಬ ಶಂಕೆಯಲ್ಲಿ ಓರ್ವ ದಲಿತ ವ್ಯಕ್ತಿ ಒಳಗೊಂಡು ಇಬ್ಬರು ಯುವಕರನ್ನು ತಲೆ ಕೆಳಕಾಗಿ ನೇತು ಹಾಕಿ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ತೆಲಂಗಾಣದ ಮಂಚಿರಿಯಾಲ್ ಜಿಲ್ಲೆಯ ಮಂದಮಾರಿ ಪಟ್ಟಣದಲ್ಲಿ ನಡೆದಿದೆ.

ಘಟನೆಗ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಕೊಮುರಾಜುಲ ರಾಮುಲು, ಅವರ ಪತ್ನಿ ಸ್ವರೂಪ ಮತ್ತು ಪುತ್ರ ಶ್ರೀನಿವಾಸ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಥಳೀಯ ಪೊಲೀಸರ ಪ್ರಕಾರ, ಮಂದಮಾರಿಯ ಅಂಗಡಿ ಬಜಾರ್‌ನ ಕೋಮುರಾಜು ರಾಮುಲು, ಆತನ ಪತ್ನಿ ಸ್ವರೂಪ ಹಾಗೂ ಅವರ ಪುತ್ರನಾದ ಶ್ರೀನಿವಾಸ್ ಪಟ್ಟಣದ ಹೊರವಲಯದಲ್ಲಿನ ಗಂಗನೀಲ್ಲಪಂಪುಲ ಬಳಿ ಮೇಕೆಯ ಗುಂಪೊಂದನ್ನು ಸಾಕಿಕೊಂಡಿದ್ದರು. ಆ ಗುಂಪಿನಿಂದ ಮೇಕೆಯೊಂದು ಕಾಣೆಯಾಗಿರುವುದು ಇಪ್ಪತ್ತು ದಿನಗಳ ಹಿಂದೆ ಅವರ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೋಪಾಲಕ ತೇಜಾ ಮತ್ತು ಆತನ ದಲಿತ ಸ್ನೇಹಿತ ಚಿಲುಮುಲ ಕಿರಣ್ ಅವರನ್ನು ಮೇಕೆಯನ್ನು ಕದ್ದಿರುವ ಶಂಕೆಯ ಮೇರೆಗೆ ಕಳೆದ ಶುಕ್ರವಾರ ಶೆಡ್‌ಗೆ ಕರೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೆಡ್‌ಗೆ ಕರೆಸಿದ ನಂತರ ಅವರನ್ನು ಕಟ್ಟಿ ತಲೆಕೆಳಕಾಗಿ ನೇತು ಹಾಕಿದ್ದಾರೆ. ನಂತರ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಆರೋಪಿಗಳೆ ಈ ಘಟನೆಯನ್ನು ತಮ್ಮ ಮೊಬೈಲ್‌ ಫೋನ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.5ರಂದು ‘ಇಂಡಿಯಾ’ ಸಂಸದರ ಸಭೆ ಕರೆದ ಖರ್ಗೆ; ಒಂದು ಚುನಾವಣೆಯ ಬಗ್ಗೆ ವಾಗ್ದಾಳಿ

ಶನಿವಾರದಂದು ತೀವ್ರವಾಗಿ ಗಾಯಗೊಂಡಿದ್ದ ತೇಜಾ ಹಾಗೂ ಕಿರಣ್ ತಮ್ಮ ಮನೆಗಳಿಗೆ ಹಿಂದಿರುಗಿದ ನಂತರ ಈ ಘಟನೆಯು ಬೆಳಕಿಗೆ ಬಂದಿದೆ.

ಕೂಡಲೇ ಮಂದಾಮಾರಿಗೆ ಧಾವಿಸಿರುವ ಬೆಲ್ಲಂಪಲ್ಲಿ ಸಹಾಯಕ ಪೊಲೀಸ್ ಆಯುಕ್ತ ಬಿ. ಸಾದಯ್ಯ ಹಾಗೂ ಸಬ್ ಇನ್ಸ್‌ಪೆಕ್ಟರ್ ಚಂದ್ರಕುಮಾರ್, ಘಟನೆಯ ಕುರಿತು ವಿಚಾರಣೆ ಕೈಗೊಂಡಿದ್ದಾರೆ. ನಂತರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಿ ಕುಟುಂಬದ ಮೂವರು ಸದಸ್ಯರು ಹಾಗೂ ಅವರ ಸಹಾಯಕ ನರೇಶ್ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...