ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ: ಇನ್ನೂ ಪತ್ತೆಯಾಗಿಲ್ಲ 9 ಮಂದಿ

Date:

ತೆಲಂಗಾಣದ ಪಾಶಮಿಲರಂನಲ್ಲಿರುವ ಔಷಧ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 38 ಮಂದಿ ಮೃತಪಟ್ಟಿದ್ದರು. ಸುಮಾರು 35 ಮಂದಿ ಗಾಯಗೊಂಡಿದ್ದರು. ಹಲವರು ಕಾಣೆಯಾಗಿದ್ದರು. ಅವರಲ್ಲಿ, 9 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ ಪತ್ತೆಗಾಗಿನ ಪ್ರಯತ್ನಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್‌ 30ರಂದು ಔಷಧ ತಯಾರಿಕ ಘಟಕದಲ್ಲಿ ಸ್ಪೋಟ ಸಂಭವಿಸಿತ್ತು. ಸ್ಪೋಟಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ಕಾರಣಗಳನ್ನು ಗುರುತಿಸಲು ಮತ್ತು ಮೌಲ್ಯಮಾಪನ ಮಾಡಲು ತಜ್ಞರ ತಂಡವನ್ನು ರಚಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಕಾಣೆಯಾದವರ ಪತ್ತೆಗೆ ಶೋಧಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಾರಿತೋಷ್ ಪಂಕಜ್ ತಿಳಿಸಿದ್ದಾರೆ.

ವಿಜ್ಞಾನಿ ಡಾ. ಬಿ.ವೆಂಕಟೇಶ್ವರ್ ರಾವ್ ನೇತೃತ್ವದ ತಜ್ಞರ ಸಮಿತಿಯು ಇನ್ನು ಒಂದು ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲಿದೆ. ವರದಿ ಆಧಾರಿಸಿ ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...