ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

Date:

ಯಂಗ್ ಇಂಡಿಯಾ ಕೌಶಲಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂಪಾಯಿ ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ.

ಅಮೆರಿಕದಲ್ಲಿ ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆ ಅದಾನಿ ಗ್ರೂಪ್‌ನಲ್ಲಿ ತಮ್ಮ ಸರ್ಕಾರ ಯಾವುದೇ ಹಣ ಸ್ವೀಕರಿಸುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಏನಿದು ಅದಾನಿ ಲಂಚದ ಹಗರಣ: ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಂತ್ ರೆಡ್ಡಿ, “ನನ್ನ ಅಥವಾ ನಮ್ಮ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಯಾವುದೇ ಚರ್ಚೆಯಲ್ಲಿ, ಯಾವುದೇ ಸಂದರ್ಭದಲ್ಲಿ ತೊಡಗಿಕೊಳ್ಳಲು ನಾನು ಮತ್ತು ನನ್ನ ಸಚಿವ ಸಂಪುಟದ ಸದಸ್ಯರುಗಳು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

“ಯಾವುದೇ ಚರ್ಚೆಯಲ್ಲಿ ಸಿಲುಕುವುದು ಬೇಡವೆಂದು ನಮ್ಮ ಸರ್ಕಾರದ ಪರವಾಗಿ ನಮ್ಮ ಅಧಿಕಾರಿ ಜಯೇಶ್ ರಂಜನ್ ಅದಾನಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ವಿವಾದಗಳು ಇರುವಾಗ ತೆಲಂಗಾಣ ಸರ್ಕಾರವು ಅದಾನಿ ಸಂಸ್ಥೆಯಿಂದ 100 ಕೋಟಿ ರೂಪಾಯಿ ದೇಣಿಗೆ ಪಡೆಯಲು ಸಿದ್ಧವಿಲ್ಲ ಎಂದು ತಿಳಿಸಿದ್ದೇವೆ” ಎಂದರು.

ತೆಲಂಗಾಣ ಸರ್ಕಾರದ ವಿಶೇಷ ಮುಖ್ಯ ಕಾರ್ಯದರ್ಶಿ ಜಯೇಶ್ ರಂಜನ್ ಅವರು ಅದಾನಿ ಫೌಂಡೇಶನ್‌ನ ಅಧ್ಯಕ್ಷೆ ಪ್ರೀತಿ ಅದಾನಿ ಅವರಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ವಿಶ್ವವಿದ್ಯಾಲಯವು ಇತ್ತೀಚೆಗೆ ಆದಾಯ ತೆರಿಗೆಯ ಸೆಕ್ಷನ್ 80ಜಿ ಅಡಿಯಲ್ಲಿ ವಿನಾಯಿತಿ ಪಡೆದಿದೆ ಎಂದು ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...