ವೃದ್ಧ ಪೋಷಕರನ್ನು ನಿರ್ಲಕ್ಷಿಸುವ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

Date:

ವೃದ್ಧ ಪೋಷಕರನ್ನು ನೋಡಿಕೊಳ್ಳದ, ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತಗೊಳಿಸಲು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಗುರುವಾರ ಹೇಳಿದ್ದಾರೆ.

ಹೊಸದಾಗಿ ನೇಮಕಗೊಂಡ ಗ್ರೂಪ್-1 ಮತ್ತು ಗ್ರೂಪ್-2 ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರೆಡ್ಡಿ, “ಸರ್ಕಾರಿ ಅಧಿಕಾರಿಗಳಿಗೆ ಕಾರ್ಯನಿರ್ವಾಹಕ ಶಿಕ್ಷಣವನ್ನು ಒದಗಿಸಲು ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಸ್ವಾಮ್ಯದ ಎಂಸಿಆರ್ ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆ ನಡುವೆ ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕಲಾಗುವುದು” ಎಂದರು.

ಇದನ್ನು ಓದಿದ್ದೀರಾ? ಪೋಷಕರು ನೋಡಿದ ಯುವಕನನ್ನು ಮದುವೆಯಾಗಲು ಯುವತಿ ನಕಾರ: ಮಗಳನ್ನು ಕೊಲೆಗೈದ ತಂದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಪೋಷಕರ ತ್ಯಾಗದಿಂದಾಗಿ ಯುವ ಅಧಿಕಾರಿಗಳು ಈ ಅಪೇಕ್ಷಿತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಹಾಗಿದ್ದಾಗ ಪೋಷಕರನ್ನು ಸರಿಯಾಗಿ ನೋಡಿಕೊಳ್ಳಬೇಕು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ, ಪೋಷಕರನ್ನು ನೋಡಿಕೊಳ್ಳದವರ ವೇತನದಲ್ಲಿ ಶೇ. 10-15 ರಷ್ಟು ಕಡಿತಗೊಳಿಸಿ ಪೋಷಕರ ಖಾತೆಗಳಿಗೆ ಜಮಾ ಮಾಡಲು ನಾವು ಯೋಜಿಸಿದ್ದೇವೆ” ಎಂದು ತಿಳಿಸಿದರು.

ಕೊನೆಯ ಗ್ರೂಪ್-1 ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು 2011ರಲ್ಲಿ ಅವಿಭಜಿತ ಆಂಧ್ರಪ್ರದೇಶದಲ್ಲಿ ನಡೆಸಲಾಗಿತ್ತು ಎಂದು ನೆನಪಿಸಿಕೊಳ್ಳುತ್ತಾ, ನೇಮಕಾತಿ ಪತ್ರಗಳನ್ನು ನೀಡಲು ಎಂಟು ವರ್ಷಗಳು ಬೇಕಾಯಿತು, ಈ ಪ್ರಕ್ರಿಯೆಯು 2019ರಲ್ಲಿ ಮಾತ್ರ ಪೂರ್ಣಗೊಂಡಿತು ಎಂದು ಹೇಳಿದರು. “ತೆಲಂಗಾಣ ರಚನೆಯಾದ ನಂತರವೂ 2011 ರಿಂದ 2025 ರವರೆಗೆ 15 ವರ್ಷಗಳ ಕಾಲ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗಲಿಲ್ಲ. ರಾಜ್ಯ ಸರ್ಕಾರವು ಈಗ ಗ್ರೂಪ್-1 ಪರೀಕ್ಷೆಗಳನ್ನು ಯುವಕರ ಆಕಾಂಕ್ಷೆಗಳಿಗೆ ಅನುಗುಣವಾಗಿ ನಡೆಸುವಂತೆ ನೋಡಿಕೊಳ್ಳುತ್ತದೆ” ಎಂದು ಹೇಳಿದರು.

ಇನ್ನು ಕರ್ನಾಟಕದಲ್ಲಿ ಪೋಷಕರಿಂದ ಆಸ್ತಿ ಅಥವಾ ವಿಲ್‌ಗಳನ್ನು ಮಾಡಿಸಿಕೊಂಡು ನಂತರ ಅವರನ್ನು ನಿರ್ಲಕ್ಷಿಸುವ ಅಥವಾ ವೃದ್ಧಾಶ್ರಮಗಳಿಗೆ/ಆಸ್ಪತ್ರೆಗಳಿಗೆ ಬಿಡುವ ಮಕ್ಕಳ ವಿರುದ್ಧ ಸರ್ಕಾರ ಕಠಿಣ ನಿಲುವು ತಳೆದಿದೆ. ಇಂತಹ ಸಂದರ್ಭಗಳಲ್ಲಿ, ಹಿರಿಯ ನಾಗರಿಕರ ಸಂರಕ್ಷಣೆ ಮತ್ತು ಕಲ್ಯಾಣ ಕಾಯ್ದೆ 2007ರ ಅಡಿಯಲ್ಲಿ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಿ ಮತ್ತೆ ಪೋಷಕರಿಗೆ ಆಸ್ತಿ ಹಕ್ಕು ನೀಡಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಹಲವು ಪ್ರಕರಣಗಳಲ್ಲಿ ಕರ್ನಾಟಕ ಹೈಕೋರ್ಟ್, ಪೋಷಕರನ್ನು ನೋಡಿಕೊಳ್ಳುವುದು ಕೇವಲ ಮಾನವೀಯತೆಯಲ್ಲ, ಅದು ಮಕ್ಕಳ ಕಾನೂನುಬದ್ಧ ಕರ್ತವ್ಯ ಎಂದು ಸ್ಪಷ್ಟಪಡಿಸಿದೆ. ಇದನ್ನು ಉಲ್ಲಂಘಿಸುವ ನೌಕರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರವೂ ಇದೆ. ರಾಜ್ಯದಲ್ಲಿ ಪೋಷಕರನ್ನು ಬಿಟ್ಟುಕೊಡುವ ಅಥವಾ ನಿರ್ಲಕ್ಷಿಸುವ ಸರ್ಕಾರಿ ನೌಕರರ ನಡವಳಿಕೆಯನ್ನು ‘ನೈತಿಕ ಅಧಃಪತನ’ ಎಂದು ಪರಿಗಣಿಸಿ, ಅವರ ವಿರುದ್ಧ ಇಲಾಖಾ ತನಿಖೆ ಮತ್ತು ಶಿಸ್ತು ಕ್ರಮಗಳನ್ನು ಜರುಗಿಸಲು ಅವಕಾಶವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...