ತೆಲಂಗಾಣ | ಕೇವಲ ₹22 ಸಾಲ ವಾಪಸ್‌ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿ ಕೊಲೆ

Date:

ಕೇವಲ ₹22 ಹಳೆಯ ಸಾಲ ವಾಪಸ್‌ ಕೊಡಲಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ದಾರುಣ ಘಟನೆ ತೆಲಂಗಾಣದ ಮೆದಕ್‌ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಉತ್ತರಪ್ರದೇಶ ಮೂಲದ ಮೊಹಮ್ಮದ್ ಸಿರಾಜ್ ಮತ್ತು ಮಹೇಶ ಮೆದಕ್‌ ಜಿಲ್ಲೆಗೆ ವಲಸೆ ಬಂದು ದಿನಗೂಲಿ ಕೆಲಸ ಮಾಡುತ್ತಿದ್ದರು. ರವಿಕುಮಾರ್‌ ಎಂಬ ವ್ಯಕ್ತಿಯೊಂದಿಗೆ ಒಂದೇ ಕೋಣೆಯಲ್ಲಿ ವಾಸವಿದ್ದರು. ಮೊಹಮ್ಮದ್ ಸಿರಾಜ್ ಹಾಗೂ ಮಹೇಶ ಇಬ್ಬರು ಮದ್ಯ ವ್ಯಸನಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಕರ ಸಂಕ್ರಾಂತಿ ದಿನದಂದು ಮರದ ಕೆಳಗೆ ಇಬ್ಬರು ಕುಳಿತು ಮದ್ಯ ಸೇವಿಸುವಾಗ ಮಹೇಶ ಸಿರಾಜ್‌ನಿಗೆ ಹಳೆಯ ₹22 ಸಾಲ ಮರುಪಾವತಿಸುವಂತೆ ಒತ್ತಾಯ ಮಾಡಿದ್ದಾನೆ. ಬಳಿಕ ಅದು ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಕುಡಿದ ಮತ್ತಿನಲ್ಲಿದ್ದ ಮಹೇಶ ಸಿರಾಜ್‌ನ ತಲೆಯನ್ನು ಹಿಡಿದು ಮರಕ್ಕೆ ಗುದ್ದಿ, ಬಳಿಕ ಕಲ್ಲಿನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಸಿರಾಜ್‌ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಬಳಿಕ ಕೊಲೆಗೈದ ಮಹೇಶ ಅಲ್ಲಿಂದ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಅಧಿಕಾರಿಗಳ ಮನವೋಲಿಕೆ ವಿಫಲ : ಮುಂದುವರೆದ ಅಲೆಮಾರಿಗಳ ಧರಣಿ

ರೂಮ್‌ಮೆಟ್ ರವಿಕುಮಾರ್ ನೀಡಿದ ದೂರಿನ ಮೇರೆಗೆ ಮೆದಕ್‌ ಜಿಲ್ಲೆಯ ಚೆಗುಂಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಮಹೇಶ ಎಂಬಾತನನ್ನು ಪೊಲೀಸರು ಮಂಗಳವಾರ ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...