ತೆಲಂಗಾಣ ಸುರಂಗ ಕುಸಿತ: 10 ದಿನ ಕಳೆದರೂ ಪತ್ತೆಯಾಗದ 8 ಕಾರ್ಮಿಕರು

Date:

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ.

ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದರು. ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.

ಈ ಕುರಿತು ಎನ್‌ಡಿಆರ್‌ಎಫ್ ಕಮಾಂಡೆಂಟ್ ವಿವಿಎನ್ ಪ್ರಸನ್ನ ಕುಮಾರ್ ಮಾತನಾಡಿ, ಸುರಂಗ ಕುಸಿತದ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ ಉತ್ತರಾಖಂಡದ ರ‍್ಯಾಟ್ ಮೈನರ್, 300 ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಕಳೆದ 10 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ ಯಾವುದೇ ಕಾರ್ಮಿಕರು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ಸದ್ಯ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಇನ್ನೂ ಹೈದರಾಬಾದ್‌ನ ರಾಷ್ಟ್ರೀಯ ಭೂಭೌತ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸುರಂಗದೊಳಗೆ ನೆಲಕ್ಕೆ ನುಗ್ಗುವ ರಾಡಾರ್ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆ ಬಳಿಕ ಗುರುತಿಸಿದ ಸ್ಥಳಗಳನ್ನು ರಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಭಾನುವಾರ ಭೇಟಿ ನೀಡಿ, ಸಿಲುಕಿಕೊಂಡಿರುವ ಕಾರ್ಮಿಕರ ಮಾಹಿತಿ ಪಡೆದುಕೊಂಡರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಬೆಂಬಲ ನೀಡುವ ಕುರಿತು ತಿಳಿಸಿದರು.

ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...