ಸಿನಿಮಾ ಪ್ರದರ್ಶನಕ್ಕೆ ಮುನ್ನ ಟಗರು ಬಲಿ; ತೆಲುಗು ನಟ ಎನ್ ಬಾಲಕೃಷ್ಣ ಅಭಿಮಾನಗಳ ಬಂಧನ

Date:

ಜನವರಿ 12 ರಂದು ಡಾಕು ಮಹಾರಾಜ್ ಚಲನಚಿತ್ರ ಪ್ರದರ್ಶನಕ್ಕೆ ಮುನ್ನ ತಿರುಪತಿಯ ಚಿತ್ರಮಂದಿರದಲ್ಲಿ ಟಗರು ಒಂದರ ಶಿರಚ್ಛೇದ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಪೊಲೀಸರು ತೆಲುಗು ನಟ ಎನ್ ಬಾಲಕೃಷ್ಣ ಅವರ ಐವರು ಅಭಿಮಾನಿಗಳನ್ನು ಬಂಧಿಸಿದ್ದಾರೆ ಎಂದು ಶನಿವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಮೇಲ್ ಮೂಲಕ ಕಳುಹಿಸಿದ ದೂರಿನ ಮೇರೆಗೆ ಟಗರು ತಲೆ ಕಡಿದು ರಕ್ತವನ್ನು ನಟ ಎನ್ ಬಾಲಕೃಷ್ಣ ಅವರ ಪೋಸ್ಟರ್‌ಗೆ ಹಚ್ಚಿದ ಶಂಕರಯ್ಯ, ರಮೇಶ್, ಸುರೇಶ್ ರೆಡ್ಡಿ, ಪ್ರಸಾದ್ ಮತ್ತು ಮುಖೇಶ್ ಬಾಬು ಅವರನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಕಾಟೇರ – ಕನ್ನಡ ಚಿತ್ರರಂಗಕ್ಕೆ ತೋರಿದ ಹೊಸ ದಿಕ್ಸೂಚಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನಪ್ರಿಯ ಟಾಲಿವುಡ್ ನಟ ಮತ್ತು ಹಿಂದೂಪುರ ಶಾಸಕ ಬಾಲಕೃಷ್ಣ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಸೋದರ ಮಾವ ಆಗಿದ್ದಾರೆ.

“ಪೇಟಾದಿಂದ ಇಮೇಲ್ ಬಂದಿತ್ತು. ಅವರು ಎಸ್‌ಪಿಗೆ ಇಮೇಲ್ ಮೂಲಕ ದೂರು ನೀಡಿದ್ದಾರೆ. ಜನವರಿ 16ರಂದು ನಾವು ವಿಚಾರಣೆ ನಡೆಸಿ ತಿರುಪತಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ತಿರುಪತಿ ಪೂರ್ವ ಉಪವಿಭಾಗೀಯ ಪೊಲೀಸ್ ಅಧಿಕಾರಿ ವೆಂಕಟ್ ನಾರಾಯಣ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

ಈ ಪ್ರಾಣಿ ಬಲಿಯಲ್ಲಿ ಭಾಗಿಯಾಗಿದ್ದ ಶಂಕೆಯಲ್ಲಿ ಇತರ ಜನರನ್ನು ಕೂಡಾ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ನಾರಾಯಣ ಹೇಳಿದರು.

ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಟಗರು ಶಿರಚ್ಛೇದನದ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸರ ಪ್ರಕಾರ ಜನವರಿ 12ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಟಗರನ್ನು ಬಲಿ ನೀಡಲಾಗಿದೆ. ಸದ್ಯ ಬಂಧಿತ ಐವರೂ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...