ಮಾರ್ಚ್‌ನಿಂದ ಸಾಮಾನ್ಯಕ್ಕಿಂತ ಅಧಿಕ ತಾಪಮಾನ; ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಈಗಾಗಲೇ ಬೆಚ್ಚಗಿನ ಚಳಿಗಾಲ ಮುಗಿದಿದ್ದು, ಬಿಸಿಲು ಚಳಿಗಾಲದ ಅಂತ್ಯದಲ್ಲೇ ಅಧಿಕವಾಗಿದೆ. ಈ ನಡುವೆ ಮಾರ್ಚ್‌ನಿಂದ ಅಂದರೆ ಇಂದಿನಿಂದ (ಮಾರ್ಚ್‌ 1) ದೇಶದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ. ಹಾಗೆಯೇ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

1901ರ ನಂತರ 2025ರ ಫೆಬ್ರವರಿಯು ಅತೀ ಅಧಿಕ ಬಿಸಿಯಾದ ತಿಂಗಳು ಎಂದು ಐಎಂಡಿ ಹೇಳಿದೆ. ಫೆಬ್ರವರಿಯ ಸರಾಸರಿ ತಾಪಮಾನ 20.7 ಡಿಗ್ರಿ ಸೆಲ್ಸಿಯಸ್ ಆಗಿದೆ. ಆದರೆ ಈ ವರ್ಷ 22.04 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 1901ರ ಬಳಿಕ ದಾಖಲಾದ ಅತೀ ಗರಿಷ್ಠ ತಾಪಮಾನ ಮತ್ತು ಅತ್ಯಧಿಕ ಕನಿಷ್ಠ ತಾಪಮಾನ ಇದಾಗಿದೆ.

ಇದನ್ನು ಓದಿದ್ದೀರಾ? ಅತೀವ ಬಿಸಿಲು | ರಾಜ್ಯದ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ದೇಶದಲ್ಲಿ ಜನವರಿ ಮತ್ತು ಫೆಬ್ರವರಿ ನಡುವೆ ಶೇಕಡ 59ರಷ್ಟು ಮಳೆಯ ಕೊರತೆ ಕಾಣಿಸಿಕೊಂಡಿದೆ. ಮಧ್ಯ ಭಾರತದಲ್ಲಿ ಶೇಖಡ 89ರಷ್ಟು ಮಳೆಯ ಕೊರತೆಯಿದ್ದರೆ, ವಾಯುವ್ಯ ಭಾರತದಲ್ಲಿ ಶೇಕಡ 64ರಷ್ಟು ಮಳೆ ಕೊರತೆ ಕಂಡು ಬಂದಿದೆ.

ಇನ್ನು ಪರ್ಯಾಯ ದ್ವೀಪ ಭಾರತದ ದಕ್ಷಿಣ ಭಾಗಗಳು ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ, ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಶಾನ್ಯ ಭಾರತ, ಉತ್ತರ ಭಾರತ, ಪರ್ಯಾಯ ದ್ವೀಪದ ನೈಋತ್ಯ ಮತ್ತು ದಕ್ಷಿಣ ಭಾಗಗಳನ್ನು ಹೊರತುಪಡಿಸಿ ದೇಶದ ಅಧಿಕ ಭಾಗಗಳಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಅಧಿಕ ಶಾಖದ ಅಲೆಗಳು ಇರಬಹುದೆಂದು ಮುನ್ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಕರ್ನಾಟಕದ ಗೇರುಸೊಪ್ಪ ಸೇರಿ ಹಲವೆಡೆ ಮಳೆ; 4 ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

ಈ ನಡುವೆ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಬಿಸಿ ಗಾಳಿ ಇರಬಹುದು. ಇದು ಕೃಷಿಯ ಮೇಲೆ ಪ್ರಭಾವ ಬೀರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪಂಜಾಬ್ ಮತ್ತು ಹರಿಯಾಣದಲ್ಲಿ ಗೋಧಿಯಂತಹ ಪ್ರಮುಖ ರಬಿ ಬೆಳೆಗಳ ಕೊಯ್ಲು ಮಾರ್ಚ್ ಮಧ್ಯದಲ್ಲಿ ಪ್ರಾರಂಭವಾಗುತ್ತದೆ. ಈ ನಡುವೆ ತಾಪಮಾನ ಏರಿಕೆ ಮುನ್ಸೂಚನೆ ರೈತರಲ್ಲಿ ಆತಂಕ ಸೃಷ್ಟಿಸಿದೆ. ಈಗಾಗಲೇ ಕಳೆದ ಮೂರು ವರ್ಷಗಳಿಂದ ದೇಶದಲ್ಲಿ ಗೋಧಿ ಬೆಳೆಯಲ್ಲಿ ಕೊರತೆ ಕಾಣಿಸಿಕೊಂಡಿದೆ. ಅದರಿಂದಾಗಿ ಗೋಧಿ ಬೆಲೆಯು ಗಗನಕ್ಕೇರಿದೆ. ಈಗ ಮತ್ತೆ ಹವಾಮಾನ ಬದಲಾವಣೆಯಿಂದಾಗಿ ಗೋಧಿ ಬೆಳೆ ಮೇಲೆ ಪ್ರಭಾವ ಬೀರಿದರೆ ಮತ್ತಷ್ಟು ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...