ನವದೆಹಲಿ: ಮೇಲ್ಸೇತುವೆ ನಿರ್ಮಾಣಕ್ಕಾಗಿ ಹಿಂದೂ ಹಾಗೂ ಮುಸ್ಲಿಂ ಧಾರ್ಮಿಕ ಕಟ್ಟಡಗಳ ತೆರವು

Date:

ಈಶಾನ್ಯ ನವದೆಹಲಿಯ ಭಜನ್‌ಪುರ್ ಚೌಕ್‌ನಲ್ಲಿ ಭಾನುವಾರ ಬೆಳಗ್ಗೆ(ಜುಲೈ 2) ಮೇಲ್ಸೇತುವೆ ನಿರ್ಮಾಣಕ್ಕೆ ಭಾರೀ ಪೊಲೀಸ್ ಬಂದೋಬಸ್ತ್‌ ನಡುವೆ ದೇವಸ್ಥಾನ ಮತ್ತು ಮಜಾರ್ (ಮುಸ್ಲಿಂ ದೇಗುಲ)ಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹರನ್ಪುರ ಹೆದ್ದಾರಿಯ ನಿರ್ಮಾಣ ನಡೆಯುತ್ತಿರುವುದರಿಂದ ರಸ್ತೆಯನ್ನು ವಿಸ್ತರಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಭಜನ್‌ಪುರ್ ಚೌಕ್‌ನಿಂದ ದೇವಾಲಯ ಮತ್ತು ಮಜಾರ್ ತೆರವುಗೊಳಿಸುವ ನಿರ್ಧಾರವನ್ನು ನವದೆಹಲಿಯ ಧಾರ್ಮಿಕ ಸಮಿತಿಯ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಎಲ್ಲವೂ ಶಾಂತಿಯುತವಾಗಿ ನೆರವೇರಿಸಲಾಗಿದೆ ಎಂದು ಈಶಾನ್ಯ ಡಿಸಿಪಿ ಡಾ. ಜಾಯ್‌ ಎನ್‌ ಟಿರ್ಕಿ ತಿಳಿಸಿದ್ದಾರೆ.

“ಎರಡೂ ದಾರ್ಮಿಕ ಸ್ಥಳಗಳ ತೆರವುಗೊಳಿಸುವ ನಿರ್ಧಾರವನ್ನು ಧಾರ್ಮಿಕ ಸಮಿತಿಯು ಅನುಮೋದಿಸಿದೆ ಮತ್ತು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್ ಅವರ ಆದೇಶದ ಮೇರೆಗೆ ಈ ಧ್ವಂಸ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಕಾರ್ಯಾಚರಣೆಯು ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ. ನಿವಾಸಿಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ಸೂಕ್ತ ಸಂವಾದ ನಡೆಸಲಾಯಿತು” ಎಂದು ಈಶಾನ್ಯ ಡಿಸಿಪಿ ಡಾ. ಜಾಯ್‌ ಎನ್‌ ಟಿರ್ಕಿ ತಿಳಿಸಿದ್ದಾರೆ.   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರು ಜನರಿಂದ ಆಯ್ಕೆಯಾದ ಸರ್ಕಾರಕ್ಕಿಂತ ದೊಡ್ಡವರೇ?

ಭಜನಪುರ ಚೌಕ್‌ನ ರಸ್ತೆಯ ಎದುರು ಹನುಮಾನ್‌ ದೇವಸ್ಥಾನ ಮತ್ತು ಮಜಾರ್ ಇತ್ತು. ಕೆಲವು ದಿನಗಳ ಹಿಂದೆ, ಸಹರನ್ಪುರ ಮೇಲ್ಸೇತುವೆ ನಿರ್ಮಾಣಕ್ಕಾಗಿ ರಸ್ತೆಯನ್ನು ವಿಸ್ತರಿಸಲು ಎರಡೂ ಸ್ಥಳಗಳನ್ನು ತೆರವುಗೊಳಿಸಬೇಕು ಎಂದು ಧಾರ್ಮಿಕ ಸಮಿತಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ನವದೆಹಲಿ ಭಜನ್‌ಪುರ್ ಚೌಕ್‌ ಅನ್ನು ಕೋಮು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ. 2020ರಲ್ಲಿ ಈ ಪ್ರದೇಶದಲ್ಲಿ ಗಲಭೆ ಉಂಟಾಗಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟು, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...