ಉತ್ತರ ಪ್ರದೇಶ | ಗೋಹತ್ಯೆ ಶಂಕೆ: ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

Date:

ಹಸುವೊಂದನ್ನು ಕೊಂದಿರುವ ಶಂಕೆಯಿಂದ ಸ್ವಘೋಷಿತ ಗೋರಕ್ಷಕರು ವ್ಯಕ್ತಿಯೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಸುಕಿನ ವೇಳೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಶಹದೀನ್ ಖುರೇಷಿ ಕೆಲ ಗಂಟೆಗಳ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಈ ಭಯಾನಕ ದಾಳಿಯ ವಿಡಿಯೊವನ್ನು ಗೋರಕ್ಷಕರು ಆನ್‌ಲೈನ್‌ನಲ್ಲಿ ಮಂಗಳವಾರ ಹರಿಯಬಿಟ್ಟಿದ್ದಾರೆ. ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ವ್ಯಕ್ತಿಯನ್ನು ಒದೆಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯ ವಿಡಿಯೊದಲ್ಲಿ ಕಾಣಿಸುತ್ತಿದೆ.

ನೆಲದಲ್ಲಿ ಬಿದ್ದಿರುವ ವ್ಯಕ್ತಿಯ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು,ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಸಂತ್ರಸ್ತ ವ್ಯಕ್ತಿಯ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಸಂತ್ರಸ್ತ ವ್ಯಕ್ತಿಯೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ.ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

“ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯವಹಾರಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಹಾಗೂ ಈ ಮೊದಲು ಯಾವುದೇ ಯಾವುದೇ ಪ್ರಕರಣ ಅವರ ವಿರುದ್ಧ ದಾಖಲಾಗಿರಲಿಲ್ಲ. ವರ್ಷದ ಹಿಂದೆ ಅಸ್ವಸ್ಥರಾಗಿದ್ದ ಅವರು ಆರು ತಿಂಗಳಿಂದ ಆಸ್ಪತ್ರೆಯಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಅವರ ಉದ್ಯೋಗ ನಷ್ಟವಾಯಿತು.ನನ್ನ ಸಹೋದರ ಅಂಥ ಕೆಲಸ ಎಂದೂ ಮಾಡಿಲ್ಲ. ಬೇರೆಯವರು ಮಾಡಿರಬಹುದು. ಅದಕ್ಕೆ ಅವರು ಬೆಲೆ ತೆರುವಂತಾಗಿದೆ” ಎಂದು ಮೃತ ವ್ಯಕ್ತಿಯ ಸಹೋದರ ಶಹಜಾದ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...