ಭೀಕರ ಅವಘಡ | ಹೊತ್ತಿ ಉರಿದ ಕಚ್ಚಾ ತೈಲ ಸಾಗಿಸುತಿದ್ದ ರೈಲು; ಸಾವಿರಾರು ಜನರಿಗೆ ತೊಂದರೆ

Date:

ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು ರೈಲು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.

ಬೆಂಕಿ ಅವಘಡದಿಂದಾಗಿ ಬೆಂಕಿಯ ಜ್ವಾಲೆಗಳು ಎತ್ತರಕ್ಕೆ ಚಿಮ್ಮಿದ್ದು, ದಟ್ಟ ಹೊಗೆ ಆವರಿಸಿದೆ. ರೈಲ್ವೇ ಹಳಿಗಳ ಸಮೀಪ ವಾಸಿಸುವ ನಿವಾಸಿಗಳು ಭಯಭೀತರಾಗಿದ್ದಾರೆ. ಅವರನ್ನು ತ್ವರಿತವಾಗಿ ಸ್ಥಳಾಂತರಿಸಲಾಗಿದೆ.

ಭಾನುವಾರ ಮುಂಜಾನೆ ಎನ್ನೋರ್‌ನಿಂದ ಜೋಲಾರ್‌ಪೆಟ್ಟೈಗೆ ಕಚ್ಚಾ ತೈಲ ಸಾಗಿಸುತ್ತಿದ್ದ 45 ಬೋಗಿಗಳನ್ನು ಹೊಂದಿರುವ ಸರಕು ರೈಲು ತಿರುವಲ್ಲೂರು ಬಳಿ ಸಂಚರಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಎರಡು ವ್ಯಾಗನ್‌ಗಳು ಹಳಿತಪ್ಪಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಆದಾಗ್ಯೂ, ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ. ಬೆಂಕಿ ಕಾಣಿಸಿಕೊಂಡ ಐದು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಹೋಗಿವೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಭಾರೀ ಬೆಂಕಿಯಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಳಿಗಳ ಬಳಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಎಲ್ಲ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಚೆನ್ನೈಗೆ ಹೊರಟಿದ್ದ ಮಂಗಳೂರು ಮೈಲ್, ನೀಲಗಿರಿ ಎಕ್ಸ್‌ಪ್ರೆಸ್, ಮೈಸೂರು ಎಕ್ಸ್‌ಪ್ರೆಸ್, ಕೊಯಮತ್ತೂರು ಇಂಟರ್‌ಸಿಟಿ, ತಿರುವನಂತಪುರಂ ಮೈಲ್ ಮತ್ತು ಜೋಲಾರ್‌ಪೆಟ್ಟೈ ಎಕ್ಸ್‌ಪ್ರೆಸ್ ಸೇರಿದಂತೆ ಸುಮಾರು ಎಂಟು ಎಕ್ಸ್‌ಪ್ರೆಸ್ ರೈಲುಗಳನ್ನು ಅರಕ್ಕೋಣಂ ಮತ್ತು ಕಟ್ಪಾಡಿ ನಡುವೆ ನಿಲ್ಲಿಸಲಾಗಿದೆ.

ಅದೇ ರೀತಿ, ಚೆನ್ನೈ-ಮೈಸೂರು ಶತಾಬ್ದಿ, ಚೆನ್ನೈ-ಕೊಯಮತ್ತೂರು ಕೋವೈ ಎಕ್ಸ್‌ಪ್ರೆಸ್, ಚೆನ್ನೈ-ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್ ಹಾಗೂ ಚೆನ್ನೈ-ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್ ಸೇರಿದಂತೆ ಚೆನ್ನೈ ಸೆಂಟ್ರಲ್‌ನಿಂದ ಹೊರಡಬೇಕಿದ್ದ ಎಂಟು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನಾಲ್ಕು ರೈಲುಗಳು ಗುಡೂರು ಮತ್ತು ರೇಣಿಗುಂಟ ಮಾರ್ಗದ ಮುಲಕ ಸಂಚರಿಸುತ್ತಿವೆ.

ಸ್ಥಳ ಪರಿಶೀಲನೆ ನಡೆಸಿದ ತಿರುವಳ್ಳೂರು ಜಿಲ್ಲಾಧಿಕಾರಿ ಎಂ. ಪ್ರತಾಪ್, “ಹಳಿ ಪಕ್ಕದಲ್ಲಿರುವ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಬೆಂಕಿ ನಿಯಂತ್ರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರಿಹಾರ ಕಾರ್ಯಾಚರಣೆಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅರಕ್ಕೋಣಂ ಘಟಕದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...