2 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ, ನ.14 ಕ್ಕೆ ಮತ ಎಣಿಕೆ

Date:

ಬಿಹಾರದ ವಿಧಾನಸಭೆ ಚುನಾವಣೆ ನ. 6 ಮತ್ತು ನ. 11 ರಂದು 2 ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್‌ 14 ರಂದು ನಡೆಯಲಿದೆ.

ಈ ಕುರಿತು ದೆಹಲಿಯಲ್ಲಿ ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಮೊದಲ ಬಾರಿಗೆ ಬಿಹಾರ ಚುನಾವಣೆ ನಡೆಯುತ್ತಿದೆ. ಈ ಪರಿಷ್ಕರಣೆಯಲ್ಲಿ 68.5 ಲಕ್ಷ ಮತದಾರರ ಹೆಸರನ್ನು ಡಿಲಿಟ್ ಮಾಡಲಾಗಿದೆ ಮತ್ತು 21.5 ಲಕ್ಷ ಹೊಸ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಬಿಹಾರ ಮತದಾರರ ಪಟ್ಟಿಗಳಿಗೆ ಸಂಬಂಧಿತ ಆಕ್ಷೇಪಣೆಗಳಿಗೆ ಇನ್ನೂ ಅವಕಾಶವಿದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ 243 ಕ್ಷೇತ್ರಗಳಿವೆ. ಅವುಗಳಲ್ಲಿ 38 ಪರಿಶಿಷ್ಟ ಜಾತಿ ಮತ್ತು ಎರಡು ಪರಿಶಿಷ್ಟ ಪಂಗಡ ಕ್ಷೇತ್ರಗಳು ಸೇರಿವೆ. ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 22, 2025ರಂದು ಕೊನೆಗೊಳ್ಳಲಿದೆ.

ಅಕ್ಟೋಬರ್ 10ರಂದು ಮೊದಲನೇ ಹಂತಕ್ಕೆ ಹಾಗೂ ಅಕ್ಟೋಬರ್ 13ರಂದು ಎರಡನೇ ಹಂತಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 (ಮೊದಲನೇ ಹಂತ) ಹಾಗೂ ಅಕ್ಟೋಬರ್ 20 (ಎರಡನೇ ಹಂತ) ಕೊನೆಯ ದಿನಾಂಕವಾಗಿದೆ.

ಬಿಹಾರದಲ್ಲಿ ಒಟ್ಟು 7.42 ಕೋಟಿ ಮತದಾರರಿದ್ದು, ಈ ಪೈಕಿ 3.9 ಕೋಟಿ ಪುರುಷ ಮತ್ತು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಹೊಸದಾಗಿ ಸೇರಿಸಲ್ಪಟ್ಟ ಮತದಾರರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುವುದು. ಮತದಾರರ ಚೀಟಿಯಲ್ಲಿ ಮಾಹಿತಿ ಬದಲಾವಣೆಗೆ 15 ದಿನಗಳ ಕಾಲಾವಕಾಶ ನೀಡಲಾಗುವುದು. ಶೇ. 100ರಷ್ಟು ಮತದಾನ ಕೇಂದ್ರದಲ್ಲಿ ವೆಬ್‌ ಕಾಸ್ಟಿಂಗ್‌ಗೆ ಅವಕಾಶ ಕಲ್ಪಿಸಲಾಗುವುದು. ಮತಗಟ್ಟೆಯ ಒಳಗೆ ಮತದಾರರು ಮೊಬೈಲ್‌ ಫೋನ್‌ ಕೊಂಡೊಯ್ಯುವಂತಿಲ್ಲ. ಮತದಾನದ ಬಳಿಕ ಸಿಬ್ಬಂದಿಯಿಂದ ಮೊಬೈಲ್‌ ಪಡೆಯತಕ್ಕದ್ದು ಎಂದು ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರ ಚುನಾವಣೆಯ ಮುಖ್ಯಾಂಶಗಳು:

243 ವಿಧಾನಸಭೆ ಕ್ಷೇತ್ರಗಳು

ಒಟ್ಟು ಮತದಾರರು: 7.43 ಕೋಟಿ

ಹೊಸ ಮತದಾರರು: 14 ಲಕ್ಷ

ಮತಗಟ್ಟೆಗಳು: 90,712

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...