ಮಟನ್ ಸಾಂಬಾರನಲ್ಲಿ ‘ನಲ್ಲಿಮೂಳೆ’ ಇಲ್ಲವೆಂದು ಮದುವೆ ರದ್ದುಗೊಳಿಸಿದ ವರ

Date:

ಈ ಕಾಲದಲ್ಲಿ ಮದುವೆ ಯಾವ ಕಾರಣಕ್ಕೆ ನಿಲ್ಲುತ್ತದೆ ಎಂಬುದನ್ನು ಹೇಳುವುದು ಕಷ್ಟಸಾಧ್ಯವಾಗಿದೆ. ಏಕೆಂದರೆ, ತೆಲಂಗಾಣದಲ್ಲಿ ವಧುವಿನ ಕಡೆಯವರು ಮಟನ್‌ನಲ್ಲಿ ‘ನಲ್ಲಿಮೂಳೆ’ ಹಾಕಿಲ್ಲ, ಇದರಿಂದ ನಮಗೆ ಅವಮಾನವಾಗಿದೆ ಎಂದು ವರನ ಕಡೆಯವರು ಮದುವೆಯನ್ನು ರದ್ದು ಮಾಡಿ ಹೊರನಡೆದ ಘಟನೆ ನಡೆದಿದೆ.

ವಧು ಮತ್ತು ವರರ ನಿಶ್ಚಿತಾರ್ಥ ನವೆಂಬರ್‌ನಲ್ಲಿ ನಡೆದಿತ್ತು. ವಧು ನಿಜಾಮಾಬಾದ್‌ನವರಾಗಿದ್ದರೆ, ವರ ಜಗತಿಯಾಲ್‌ನವರು. ವಧು – ವರರಿಬ್ಬರು ಮದುವೆಗೆ ಒಪ್ಪಿ ನಿಶ್ಚಿತಾರ್ಥ ನಡೆದಿದ್ದು, ಮದುವೆಯ ದಿನ ನಿಶ್ಚಯವಾಗಿತ್ತು. ಈ ಸಮಾರಂಭದ ಖುಷಿಗೆ ಮಾಂಸದೂಟ ಹಾಕುವುದಾಗಿ ವಧುವಿನ ಕಡೆಯವರು ಹೇಳಿದ್ದರು. ಅದರಂತೆಯೇ ಎರಡು ಕುಟುಂಬದ ಸದಸ್ಯರು ಮತ್ತು ಅತಿಥಿಗಳು ಊಟದ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಈ ವೇಳೆ, ಮಟನ್ ಸಾಂಬಾರಿನಲ್ಲಿ ನಲ್ಲಿಮೂಳೆ ಸಿಗಲಿಲ್ಲ ಎಂದು ಗಲಾಟೆ ಆರಂಭಿಸಿದ್ದು, ಇದು ಎರಡು ಕುಟುಂಬಗಳ ನಡುವೆ ಜಗಳಕ್ಕೆ ಕಾರಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ವಧುವಿನ ಕುಟುಂಬದವರು ಮದುವೆಯ ಸಮಯದಲ್ಲಿ ವರನ ಅತಿಥಿಗಳಿಗೆ ಮತ್ತು ಕುಟುಂಬದವರಿಗೆ ಮಟನ್‌ ನಲ್ಲಿಮೂಳೆ ನೀಡಿಲ್ಲ. ಮಟನ್ ನಲ್ಲಿ ಮೂಳೆ ನೀಡುವುದಾಗಿ ಭರವಸೆ ನೀಡಿದ್ದರೂ, ಆದರೂ ನೀಡಿಲ್ಲ ಎಂದು ವರನ ಕುಟುಂಬದವರು ದೂರಿದ್ದಾರೆ.

ಇದು ಮದುವೆ ಮನೆಯಲ್ಲಿ ಜಗಳಕ್ಕೆ ಕಾರಣವಾಯಿತು. ಈ ಬಗ್ಗೆ ಇಬ್ಬರು ಕುಟುಂಬದವರನ್ನು ಸಮಾಧಾನ ಪಡಿಸಲು ಮಧ್ಯಪ್ರವೇಶಿಸಲು ಪೊಲೀಸರನ್ನು ಕರೆಯಬೇಕಾಯಿತು.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷಾಚರಣೆ | ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ: ಆಯುಕ್ತ ಬಿ.ದಯಾನಂದ್

ಆದರೆ, ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಸಹ ವರನ ಕುಟುಂಬವನ್ನು ಸಮಾಧಾನಪಡಿಸಲು ವಿಫಲರಾದರು. ವರನ ಕುಟುಂಬದವರು ವಧುವಿನ ಕಡೆಯವರು ಮಟನ್‌ ನಲ್ಲಿಮೂಳೆ ಹಾಕದೇ ನಮಗೆ ಅವಮಾನ ಮಾಡಿದ್ದಾರೆ ಎಂದು ಮದುವೆಯನ್ನು ರದ್ದುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...