ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿದ ಮಧ್ಯಂತರ ದಾವೆ ಅರ್ಜಿಗಳಿಗೂ ಮಿತಿಯಿರಬೇಕು: ಸುಪ್ರೀಂ ಆಕ್ಷೇಪ

Date:

ಪೂಜಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆ -1991ರ ವಿವಿಧ ಸೆಕ್ಷನ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಪ್ರಶ್ನಿಸಿ ಹಲವು ಮಧ್ಯಂತರ ದಾವೆ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ.

ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ ವಿ ಸಂಜಯ್ ಕುಮಾರ್ ಅವರಿದ್ದ ಪೀಠ, ಅಂತಹ ಮಧ್ಯಂತರ ದಾವೆ ಅರ್ಜಿಗಳಿಗೆ ಮಿತಿ ಇರಬೇಕು ಎಂದು ಹೇಳಿದೆ.

“ನಾವು ಇಂದು ಪೂಜಾ ಸ್ಥಳಗಳ ಕಾಯ್ದೆಯ ಪ್ರಕರಣ ಕೈಗೆತ್ತಿಕೊಳ್ಳುವುದಿಲ್ಲ. ಇದು ತ್ರಿಸದಸ್ಯ ಪೀಠ ವಿಚಾರಣೆ ನಡೆಸಬೇಕಾದ ಪ್ರಕರಣ. ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಮಾರ್ಚ್‌ನಲ್ಲಿ ಪ್ರಕರಣ ಪಟ್ಟಿ ಮಾಡಿ. ಮಧ್ಯಂತರ ಅರ್ಜಿ ಸಲ್ಲಿಸುವುದಕ್ಕೂ ಮಿತಿ ಇರಬೇಕು” ಎಂದು ಸಂಜೀವ್‌ ಖನ್ನಾ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್, ಸಿಪಿಐ(ಎಂಎಲ್), ಜಾಮಿಯತ್ ಉಲೇಮಾ-ಇ-ಹಿಂದ್, ಹಾಗೂ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ನಾಯಕರು ಪ್ರಕರಣದಲ್ಲಿ ಮಧ್ಯಂತರ ದಾವೆ ಕೋರಿ ಅರ್ಜಿ ಸಲ್ಲಿಸಿದ್ದರು.

ಹಿರಿಯ ವಕೀಲ ದುಷ್ಯಂತ್ ದವೆ ಅವರು ಇನ್ನು ಮುಂದೆ ಮಧ್ಯಂತರ ಅರ್ಜಿಗಳಿಗೆ ಅವಕಾಶ ನೀಡಬಾರದು ಎಂದರು. ಹೊಸ ಆಧಾರಗಳು ಹುಟ್ಟಿಕೊಂಡರೆ ಮಾತ್ರ ಹೊಸ ಮಧ್ಯಂತರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನ್ಯಾಯಾಲಯ ನಿರ್ದೇಶಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ಹೊಸದಾಗಿ ಮಧ್ಯಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು, ಏಕೆಂದರೆ ಇನ್ನೂ ಕೆಲವು ಅಂಶಗಳನ್ನು ಪ್ರಸ್ತಾಪಿಸಿಲ್ಲ” ಎಂದ ನ್ಯಾಯಪೀಠ ಕಾಯ್ದೆಯನ್ನು ಪ್ರಶ್ನಿಸಿ ಮತ್ತು ನ್ಯಾಯಾಲಯದಿಂದ ಯಾವುದೇ ನೋಟಿಸ್ ಜಾರಿಯಾಗಿಲ್ಲದ ಅರ್ಜಿಗಳನ್ನು ವಜಾಗೊಳಿಸಲಾಗುವುದು. ಹೊಸ ಆಧಾರಗಳನ್ನು ಹೊಂದಿರುವ ಅರ್ಜಿದಾರರು ಅಸ್ತಿತ್ವದಲ್ಲಿರುವ ಅರ್ಜಿಗಳಲ್ಲೇ ತಮ್ಮ ಮನವಿ ಸಲ್ಲಿಸಬಹುದು ಎಂಬುದಾಗಿ ಹೇಳಿತು.

ವಕೀಲರಾದ ವಿಕಾಸ್ ಸಿಂಗ್ ಮತ್ತು ನಿಜಾಮ್ ಪಾಷಾ ಅವರು 8 ದಿನ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ಸಲ್ಲಿಸಿಲ್ಲ ಎಂದು ಗಮನಸೆಳೆದರು.

ಅದನ್ನು ಗಮನಿಸಿದ ನ್ಯಾಯಾಲಯ ಪ್ರಕರಣವನ್ನು ಏಪ್ರಿಲ್‌ನಲ್ಲಿ ತ್ರಿಸದಸ್ಯ ಪೀಠದೆದುರು ವಿಚಾರಣೆಗೆ ಬರುವಂತೆ ಪಟ್ಟಿ ಮಾಡಲು ನಿರ್ದೇಶಿಸಿತು.

ನಾಲ್ಕು ಧಾರ್ಮಿಕ ನಿಯಮಗಳ ಮೇಲೆ ಸಲ್ಲಿಸಲಾದ ಕನಿಷ್ಠ 18 ಪ್ರಕರಣಗಳು ದೇಶಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯುಳಿದಿವೆ. ಇವುಗಳಲ್ಲಿ ಸಂಭಾಲ್‌ನ ಶಾಹಿ ಜಮಾ ಮಸೀದಿ, ವಾರಣಾಸಿಯ ಜ್ಞಾನವಾಪಿ ಮಸೀದಿ, ಮಥುರಾದ ಶಾಹಿ ಈದ್ಗಾ ಮಸೀದಿ ಹಾಗೂ ರಾಜಸ್ಥಾನದ ಅಜ್ಮೀರ್‌ ದರ್ಗಾದ ಪ್ರಕರಣಗಳು ಸೇರಿಕೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...