ಹಣ ದೋಚುವ ಮುನ್ನ ದೇವರ ಆಶೀರ್ವಾದ ಪಡೆದ ಕಳ್ಳ

Date:

ಕಳ್ಳನೊಬ್ಬ ಪೆಟ್ರೋಲ್‌ ಪಂಪ್‌ನಲ್ಲಿ ಕಳ್ಳತನ ಮಾಡಲು ನುಗ್ಗಿದ್ದು, ಹಣವನ್ನು ಕದಿಯುವ ಮುನ್ನ ದೇವರಿಗೆ ನಮಸ್ಕರಿಸಿ, ಆ ಬಳಿಕ 1.6 ಲಕ್ಷ ರೂ. ನಗದು ಕದ್ದಿರುವ ಘಟನೆ ಮಧ್ಯಪ್ರದೇಶದ ರಾಜ್ ಗಢದ ಪೆಟ್ರೋಲ್ ಪಂಪ್‌ವೊಂದರಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ರಾತ್ರಿವೇಳೆ ಪೆಟ್ರೋಲ್‌ ಬಂಕ್‌ನ ಕಚೇರಿಗೆ ನುಗ್ಗಿದ ಕಳ್ಳ, ಕಚೇರಿಯಲ್ಲಿದ್ದ ದೇವರ ಪೋಟೋಗೆ ನಮಸ್ಕರಿದ್ದಾನೆ. ಬಳಿಕ, ಕಚೇರಿಯಲ್ಲಿ ಹಣದ ಡ್ರಾವರ್‌ ತೆರೆದು ಹಣವನ್ನು ದೋಚಿ, ಪರಾರಿಯಾಗಿದ್ದಾನೆ.

“ಪೆಟ್ರೋಲ್ ಬಂಕ್‌ನಲ್ಲಿ 1.57 ಲಕ್ಷ ರೂ. ಕಳುವಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಶೀಘ್ರವಾಗಿ ಬಂಧಿಸಲಾಗುವುದು” ಎಂದು ಮಾಚಲ್ ಪುರ ಪೊಲೀಸ್ ಠಾಣೆ ಅಧಿಕಾರಿ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...