2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಆದರೆ ಇತರೆ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ತಮ್ಮ ಸಹ-ಆರೋಪಿಗಳಿಗೆ ಜಾಮೀನು ನೀಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಉಮರ್, “ಈಗ ನನ್ನದು ಇದೇ ಜೀವನ” ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬನೋಜ್ಯೋತ್ಸ್ನಾ ಪೋಸ್ಟ್ ಮಾಡಿದ್ದು, ಸುಪ್ರೀಂ ಕೋರ್ಟ್ ಆದೇಶ ಪ್ರಕಟವಾದ ಬಳಿಕ ತಾನು ಮತ್ತು ಉಮರ್ ನಡುವೆ ನಡೆದ ಮಾತುಕತೆಯನ್ನು ಬರೆದುಕೊಂಡಿದ್ದಾರೆ. “ಇತರರಿಗೆ ಜಾಮೀನು ಸಿಕ್ಕಿದ್ದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ! ತುಂಬಾ ನಿರಾಳವಾಗಿದೆ” ಎಂದು ಉಮರ್ ಹೇಳಿರುವುದಾಗಿ ಉಲ್ಲೇಖಿಸಿದ್ದಾರೆ.
ಇದನ್ನು ಓದಿದ್ದೀರಾ? ಉಮರ್ ಖಾಲಿದ್, ಶಾರ್ಜೀಲ್ ಇಮಾಮ್‌ಗೆ ಜಾಮೀನು ನಕಾರ: ಸುಪ್ರೀಂ ಕೋರ್ಟ್ ವಕೀಲರ ತಕರಾರು
ಇನ್ನು ಮರುದಿನ ಜೈಲಿನಲ್ಲಿ ಭೇಟಿಯಾಗಲು ಬರುವುದಾಗಿ ಉಮರ್ ಅವರಿಗೆ ತಿಳಿಸಿದಾಗ, ಉಮರ್, “ಒಳ್ಳೆಯದು ಬನ್ನಿ. ಈಗ ಇದುವೇ ಜೀವನ” ಎಂದು ಉತ್ತರಿಸಿರುವುದಾಗಿ ಬರೆದುಕೊಂಡಿದ್ದಾರೆ.
"I am really happy for the others, who got bail! So relieved", Umar said.
— banojyotsna … (@banojyotsna) January 5, 2026
"I'll come tomorrow for Mulaqat", I replied.
"Good good, aa jana. Ab yahi zindagi hai".#UmarKhalid
ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಿಲ್ಲ. ಪ್ರಕರಣದ ಇತರ ಆರೋಪಿಗಳಾದ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಂ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ವಿಚಾರಣೆಯಿಲ್ಲದೆಯೇ ಐದು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ. “ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೇ ಹೆಚ್ಚು ಮುಖ್ಯವಾದುದು. ಇತರ ಆರೋಪಿಗಳಿಗೆ ಹೋಲಿಸಿದರೆ ಇವರಿಬ್ಬರ ಪಾತ್ರ ಭಿನ್ನವಾದುದ್ದು” ಎಂದು ಹೇಳಿದೆ.





