ದೆಹಲಿ | ಕೇಂದ್ರದ ನೀತಿಗಳ ಖಂಡಿಸಿ ಸಾವಿರಾರು ರೈತರ ಪ್ರತಿಭಟನೆ

Date:

  • ಮೂರು ಸಂಘಟನೆಗಳಿಂದ ಮಜ್ದೂರ್ ಕಿಸಾನ್‌ ಸಂಘರ್ಷ ಸಮಾವೇಶ
  • ಕೇಂದ್ರದ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳ ಖಂಡನೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಮಜ್ದೂರ್‌ ಕಿಸಾನ್‌ ಸಂಘರ್ಷ ಎಂಬ ಹೆಸರಿನಲ್ಲಿ ಸಾವಿರಾರು ರೈತರು ಮತ್ತು ಕಾರ್ಮಿಕರು ಬುಧವಾರ (ಏಪ್ರಿಲ್‌ 5) ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾರ್ಮಿಕ ಸಂಘಟನೆಗಳ ಕೇಂದ್ರ (ಸಿಐಟಿಯು), ಅಖಿಲ ಭಾರತ ಕಿಸಾನ್‌ ಸಭಾ (ಎಐಕೆಎಸ್‌) ಮತ್ತು ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘ (ಎಐಎಡಬ್ಲ್ಯುಯು) ಜಂಟಿಯಾಗಿ ಮಜ್ದೂರ್‌ ಕಿಸಾನ್‌ ಸಂಘರ್ಷ ಹೆಸರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದವು.

ದೇಶದ ನಾನಾ ಮೂಲೆಗಳಿಂದ ಸಾವಿರಾರು ರೈತರು, ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮೊದಲಾದ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯು ಕೇಂದ್ರದ ದಮನಕಾರಿ ನೀತಿಗಳ ವಿರುದ್ಧ ರೈತರು ಹಾಗೂ ಕಾರ್ಮಿಕರ ಆಕ್ರೋಶದ ದ್ಯೋತಕವಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿಕೆಯೊಂದರಲ್ಲಿ ತಿಳಿಸಿವೆ.

ಬಡ ರೈತ ಹಾಗೂ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಮತ್ತು ಉತ್ತಮ ಜೀವನ ಕಲ್ಪಿಸಲು ಸರ್ಕಾರದ ನೀತಿಗಳು ರೂಪುಗೊಳ್ಳಲಿ ಎಂದು ರೈತರು ಹಾಗೂ ಕಾರ್ಮಿಕರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಮೊಘಲ್‌ ಅರಸರ ಕುರಿತ ಅಧ್ಯಯನ ಕಡಿತ

ರೈತ ಹಾಗೂ ಕಾರ್ಮಿಕ ಸಂಘಟನೆಗಳು ಕರೆದಿರುವ ಮಜ್ದೂರ್‌ ಕಿಸಾನ್‌ ಸಂಘರ್ಷ ಸಮಾವೇಶದಲ್ಲಿ ಭಾಗವಹಿಸಿದ್ದ ರೈತ ಹಾಗೂ ಕಾರ್ಮಿಕ ನಾಯಕರು ತಾತ್ಕಾಲಿಕವಾಗಿ ನಿರ್ಮಿಸಿದ್ದ ಶಿಬಿರದಲ್ಲಿ ಕುಳಿತು ಬಿಸಿಲಿನಿಂದ ರಕ್ಷಣೆ ಪಡೆದರು.

ಇನ್ನೊಂದೆಡೆ ಭಾರತೀಯ ಕಿಸಾನ್‌ ಸಂಘದ (ಬಿಕೆಯು) ಸದಸ್ಯರು ಪಟಿಯಾಲದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...