ಬ್ರಹ್ಮಕುಮಾರೀಸ್ ಆಶ್ರಮದಲ್ಲಿ ಸಹೋದರಿಯರ ಆತ್ಮಹತ್ಯೆ ಪ್ರಕರಣ: ಮೂವರ ಬಂಧನ

Date:

ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್‌ನಲ್ಲಿರುವ ಬ್ರಹ್ಮಕುಮಾರೀಸ್ ಆಶ್ರಮದ ಇಬ್ಬರು ಸಹೋದರಿಯರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಹೋದರಿಯರಾದ ಏಕ್ತಾ ಸಿಂಘಾಲ್ (38) ಮತ್ತು ಶಿಖಾ ಸಿಂಘಾಲ್ (34), ಶುಕ್ರವಾರ ರಾತ್ರಿ ಆಶ್ರಮದಲ್ಲಿ ಆತ್ಮಹತ್ಯೆ ಮಾಡಿಕೊಂಡು, ತಮ್ಮ ಕೃತ್ಯಕ್ಕೆ ನಾಲ್ವರು ಕಾರಣರೆಂದು ಡೆತ್‌ನೋಟ್‌ ಬರೆದಿಟ್ಟು ಹೋಗಿದ್ದರು. ಡೆತ್‌ನೋಟ್‌ ಜೊತೆಗೆ ಆಶ್ರಮದಿಂದ ಮೃತರ ಮೊಬೈಲ್ ಫೋನ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗ್ರಾ ಜಿಲ್ಲೆಯ ಜಗ್ನೇರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶುಕ್ರವಾರ ರಾತ್ರಿ, ಬ್ರಹ್ಮಕುಮಾರೀಸ್ ಆಶ್ರಮಕ್ಕೆ ಸಂಬಂಧಿಸಿದ ಇಬ್ಬರು ಸಹೋದರಿಯರ ಆತ್ಮಹತ್ಯೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು” ಎಂದು ಖೇರಗಢದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ ದಾಳಿ ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ

ಕಳೆದ ಹಲವು ವರ್ಷಗಳಿಂದ ಸಹೋದರಿಯರಿಬ್ಬರೂ ಆಶ್ರಮದಲ್ಲಿ ವಾಸವಾಗಿದ್ದರು. ಡೆತ್‌ನೋಟ್‌ನಲ್ಲಿ ಸಹೋದರಿಯರು ನೀರಜ್, ತಾರಾ ಚಂದ್, ಗುಡ್ಡನ್ ಮತ್ತು ಪೂನಂ ಅವರು ತಮ್ಮ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದರು.

“ ಆರೋಪಿಗಳು ಸಹೋದರಿಯರ ಸೋದರ ಸಂಬಂಧಿ. ಇವರು ಒಟ್ಟಾಗಿ ಜಗ್ನೇರ್‌ನಲ್ಲಿ ಆಶ್ರಮವನ್ನು ಸ್ಥಾಪಿಸಿದ್ದರು. ಆತ್ಮಹತ್ಯೆ ಪತ್ರದ ಪ್ರಕಾರ 25 ಲಕ್ಷ ರೂ. ಹಣ ವಿವಾದಕ್ಕೆ ಕಾರಣವಾಗಿತ್ತು” ಎಂದು ಪೊಲೀಸರು ಹೇಳಿದ್ದಾರೆ.

ತಾರಾ ಚಂದ್, ಗುಡ್ಡನ್ ಮತ್ತು ಪೂನಂ ಅವರನ್ನು ಬಂಧಿಸಲಾಗಿದ್ದು, ನೀರಜ್ ಸಿಂಘಾಲ್‌ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಜಗ್ನೇರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಅವನೀತ್ ಮಾನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...