ಶಿಂದೆ ಟೀಕೆ; ಕುನಾಲ್ ಕಾಮ್ರಾ ವಿರುದ್ಧ ಮತ್ತೆ ಮೂರು ಪ್ರಕರಣ ದಾಖಲು

Date:

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಟೀಕೆ ಮಾಡಿದ ಸ್ಟಾಂಡಪ್ ಕಾಮೆಡಿಯನ್ ಕುನಾಲ್ ಕಾಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮತ್ತೆ ಮೂರು ಪ್ರಕರಣ ದಾಖಲಾಗಿದೆ.

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಸ್ಟಾಂಡಪ್ ಕಾಮೆಡಿ ಮಾಡಿದ್ದ ಕುನಾಲ್ ಕಾಮ್ರಾ, ಶಿಂದೆ ಅವರನ್ನು ಪರೋಕ್ಷವಾಗಿ ಟೀಕಿಸಿದ್ದರು. ತನ್ನದೇ ಪಕ್ಷವನ್ನು ಇಬ್ಭಾಗ ಮಾಡಿದ ದ್ರೋಹಿ ಎಂದು ಕರೆದಿದ್ದರು. ಆದರೆ ಎಲ್ಲಿಯೂ ಶಿಂದೆ ಹೆಸರನ್ನು ಉಲ್ಲೇಖಿಸದೆ ಥಾಣೆಯ ನಾಯಕ ಎಂದಿದ್ದರು.

ಇದನ್ನು ಓದಿದ್ದೀರಾ? ಶಿವಸೇನೆ ಕಾರ್ಯಕರ್ತರನ್ನು ಕುಟುಕಿದ ಕುನಾಲ್ ಕಾಮ್ರಾ ಹೊಸ ಹಾಡು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಟ್ಟಿಗೆದ್ದ ಶಿಂದೆ ಕಾರ್ಯಕರ್ತರು ಹಾಸ್ಯ ಕಾರ್ಯಕ್ರಮ ನಡೆದ ಸ್ಟುಡಿಯೋವನ್ನು ಧ್ವಂಸ ಮಾಡಿದ್ದರು. ಹೊಟೇಲ್‌ನಲ್ಲಿ ದಾಂಧಲೆ ಮಾಡಿದ್ದರು. ಹಾಗೆಯೇ ಕುನಾಲ್‌ಗೆ ಜೀವ ಬೆದರಿಕೆ ಕೂಡಾ ಹಾಕಿದ್ದರು. ಕುನಾಲ್ ವಿರುದ್ಧ ದೂರು ಕೂಡಾ ದಾಖಲಾಗಿತ್ತು.

ಇದೀಗ ಮತ್ತೆ ಮೂರು ದೂರು ದಾಖಲಾಗಿದೆ. ಜಲ್ಗಾವ್ ನಗರದ ಮೇಯರ್ ದೂರು ದಾಖಲಿಸಿದ್ದಾರೆ. ಹೋಟೆಲ್ ಮಾಲೀಕ ಮತ್ತು ನಾಸಿಕ್‌ನ ಉದ್ಯಮಿಯೊಬ್ಬರು ಕೂಡಾ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಈಗಾಗಲೇ ಖಾರ್ ಪೊಲೀಸರು ಎರಡು ಬಾರಿ ಕಾಮ್ರಾ ಅವರನ್ನು ವಿಚಾರಣೆ ಕರೆದಿದ್ದಾರೆ. ಆದರೆ ಕಾಮ್ರಾ ಈವರೆಗೂ ಹಾಜರಾಗಿಲ್ಲ. ಈಗ ಮತ್ತೆ ಮೂರನೇ ಬಾರಿಗೆ ಸಮನ್ಸ್ ನೀಡಲಾಗಿದೆ ಎಂದು ವರದಿಯಾಗಿದೆ.

ಕುನಾಲ್ ವಿರುದ್ಧ ಈಗಾಗಲೇ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದು, ಶುಕ್ರವಾರ ಮದ್ರಾಸ್ ಹೈಕೋರ್ಟ್ ಏಪ್ರಿಲ್ 7ರವರೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ ಇದೀಗ ಮತ್ತೆ ದೂರು ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...