ಮಣಿಪುರ ಹಿಂಸಾಚಾರ | ಬಂಡುಕೋರರೊಂದಿಗೆ ಗುಂಡಿನ ಚಕಮಕಿ; ಮೂವರು ಸಾವು

Date:

  • ಬಿಷ್ಣುಪುರದ ಖೋಯ್ದುಮಂತಬಿ ಗ್ರಾಮದಲ್ಲಿ ಹಿಂಸಾಚಾರ
  • ಮೇ 3 ರಿಂದ ಮೇತೀ ಮತ್ತು ಕುಕಿ ಸಮುದಾಯಗಳ ಘರ್ಷಣೆ

ಮಣಿಪುರ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಗಡಿ ಜಿಲ್ಲೆಗಳ ಗ್ರಾಮಸ್ಥರು ಭಯಭೀತರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯದ ಬಿಷ್ಣುಪುರ ಮತ್ತು ಚುರಚಂದ್‌ಪುರ ಜಿಲ್ಲೆಗಳ ಗಡಿ ಭಾಗದಲ್ಲಿ ಹೊಸ ಹಿಂಸಾಚಾರ ಪ್ರಕರಣಗಳು ಶನಿವಾರ (ಜುಲೈ 1) ರಾತ್ರಿ ವರದಿಯಾಗಿವೆ. ಬಂಡುಕೋರರು ಮತ್ತು ಗ್ರಾಮಗಳ ಸ್ವಯಂ ಸೇವಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಷ್ಣುಪುರದ ಖೋಯ್ದುಮಂತಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಇಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭಾನುವಾರ (ಜುಲೈ 2) ಬೆಳಿಗ್ಗೆ ಜಿಲ್ಲಾಡಳಿತ ಮಣಿಪುರ ಹಿಂಸಾಚಾರ ತಡೆಗೆ ನಿಷೇ‍ಧಾಜ್ಞೆಯ ಸಡಿಲಿಕೆ ಸಮಯವನ್ನು ಕಡಿತಗೊಳಿಸಿದೆ. ಇನ್ನು ಮುಂದೆ ಜಿಲ್ಲೆಯಲ್ಲಿ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆವರೆಗೆ ಮಾತ್ರ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ಯೆಯಾದ ಗ್ರಾಮದ ಸ್ವಯಂ ಸೇವಕರು ಮೇತೀ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗಿದೆ. ಇವರು ಗ್ರಾಮದ ತಾತ್ಕಾಲಿಕ ಬಂಕರ್‌ನಲ್ಲಿ ಕಾವಲು ಕಾಯುತ್ತಿದ್ದರು. ಸಶಸ್ತ್ರಧಾರಿಗಳಾದ ಬಂಡುಕೋರರು ನಡೆಸಿದ ದಾಳಿಯಲ್ಲಿ ಗ್ರಾಮಸ್ಥರು ಮೃತಪಟ್ಟರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರದ ವೇಳೆ ಮೃತಪಟ್ಟ ಗ್ರಾಮಸ್ಥರನ್ನು ನವೋರೆಮ್ ರಾಜ್‌ಕುಮಾರ್ (25), ಹಾಬಾಮ್ ಇಬೊಮ್ಚಾ (37) ಮತ್ತು ನಿಂಗೋಂಬಮ್ ಇಬುಂಗ್ಚಾ (32) ಎಂದು ಗುರುತಿಸಲಾಗಿದೆ.

ಗ್ರಾಮದ ಸ್ವಯಂ ಸೇವಕರು ತಮ್ಮ ಮನೆಗಳ ಮೇಲೆ ದಾಳಿಯಾಗದಂತೆ ಕಾವಲು ಕಾಯುತ್ತಿದ್ದರು. ಹೊಂಚು ಹಾಕಿ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಬಿಷ್ಣುಪುರದ ಉಪ ಪೊಲೀಸ್‌ ಆಯುಕ್ತ ಲೌರೆಂಬಮ್‌ ಬಿಕ್ರಮ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದಾಳಿಯ ಹಿಂದೆ ಕುಕಿ ಸಮುದಾಯದ ಕೈವಾಡವಿದೆ ಎಂದು ಮೀತೀ ಸಮುದಾಯದ ನಾಯಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರು ಜನರಿಂದ ಆಯ್ಕೆಯಾದ ಸರ್ಕಾರಕ್ಕಿಂತ ದೊಡ್ಡವರೇ?

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನ ಸಂಬಂಧ ಮೇತೀ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದೆ. ಈ ಮಣಿಪುರ ಹಿಂಸಾಚಾರ ಸಂಬಂಧ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಮಣಿಪುರದಲ್ಲಿ ಮೇ 3 ರಿಂದ ಆರಂಭವಾಗಿರುವ ಈ ಹಿಂಸಾಚಾರದಲ್ಲಿ ಸುಮಾರು 60 ಸಾವಿರ ಜನ ತಮ್ಮ ನಿವಾಸ ತೊರೆದು ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...