ಜಮ್ಮು ಕಾಶ್ಮೀರ | ಭಾರೀ ಮಳೆಯಿಂದಾಗಿ ಪ್ರವಾಹ; ಮೂವರ ಸಾವು

Date:

ಭಾನುವಾರ ಮುಂಜಾನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮುವಿನ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ನಶ್ರಿ ಮತ್ತು ಬನಿಹಾಲ್ ನಡುವಿನ ಸ್ಥಳಗಳಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಸಂಚಾರ ಸ್ಥಗಿತಗೊಂಡಿದೆ. ಇನ್ನು ರಾಂಬನ್‌ನ ಸೆರಿ ಬಾಗ್ನಾ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಇಬ್ಬರು ಮಕ್ಕಳು, ಸಹೋದರರಾದ ಅಕಿಬ್ ಅಹ್ಮದ್ ಮತ್ತು ಮೊಹಮ್ಮದ್ ಸಾಕಿಬ್ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆ: ಭೂಕುಸಿತ, ಪ್ರವಾಹದಿಂದ 22 ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ದಿನಗಳಲ್ಲಿ ಮಳೆಯಿಂದ ಉಂಟಾದ ಅವಘಡದಿಂದಾಗಿ ಜಮ್ಮು ಕಾಶ್ಮೀರದಲ್ಲಿ ಒಟ್ಟು ಐವರು ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ರಿಯಾಸಿ ಜಿಲ್ಲೆಯ ಅರ್ನಾಸ್ ಪ್ರದೇಶದಲ್ಲಿ ಸಿಡಿಲು ಬಡಿದು ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಮಹಿಳೆ ಗಾಯಗೊಂಡಿದ್ದಾರೆ.

ಧರಮ್‌ಕುಂಡ್ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ ಸುಮಾರು 40 ಮನೆಗಳಿಗೆ ಹಾನಿಯಾಗಿದೆ, 10 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್, “ರಾಂಬನ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ರಾಂಬನ್ ಪ್ರದೇಶದಲ್ಲಿ ರಾತ್ರಿಯಿಡೀ ಭಾರೀ ಆಲಿಕಲ್ಲು ಮಳೆ ಉಂಟಾಗಿದೆ. ಹಲವು ಸ್ಥಳಗಳಲ್ಲಿ ಭೂಕುಸಿತವಾಗಿದೆ. ಬಿರುಗಾಳಿ ಬೀಸಿದೆ” ಎಂದು ತಿಳಿಸಿದ್ದಾರೆ.

ಇನ್ನು “ಅಗತ್ಯವಿರುವಲ್ಲೆಲ್ಲಾ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾನು ಪರಿಹಾರ ಮತ್ತು ದುರಸ್ತಿ ಯೋಜನೆಗಳನ್ನು ಪರಿಶೀಲಿಸುತ್ತಿರುವೆ. ಸದ್ಯಕ್ಕೆ ಪರಿಸ್ಥಿತಿಯನ್ನು ನಿರ್ವಹಿಸುವತ್ತ ಗಮನ ಹರಿಸಲಾಗಿದೆ” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...