ಜಪಾನ್‌ ಪ್ರವಾಸಿ ಬಳಿ ಲಂಚ ಪಡೆದ ಮೂವರು ಪೊಲೀಸರ ಅಮಾನತು

Date:

ಜಪಾನ್ ಪ್ರವಾಸಿಯೊಬ್ಬರು ಹೆಲ್ಮೆಟ್‌ ಧರಸದೆ ಬೈಕ್ ಸವಾರಿ ಮಾಡಿದ ಕಾರಣಕ್ಕಾಗಿ ಅವರು ಬಳಿ ಲಂಚ ಪಡೆದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಉತ್ತರ ಪ್ರದೇಶದ ಗುರುಗ್ರಾಮ ಸಂಚಾರ ಪೊಲೀಸ್‌ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ.

ಗುರುಗ್ರಾಮದ ಗ್ಯಾಲೇರಿಯಾ ಮಾರುಕಟ್ಟೆಯ ಬಳಿ ಜಪಾನ್ ಪ್ರವಾಸಿಯೊಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದರು. ಅವರು ಹೆಲ್ಮೆಟ್‌ ಧರಿಸಿಲ್ಲವೆಂಬ ಕಾರಣಕ್ಕಾಗಿ, ಅವರನ್ನು ತಡೆದು ಪೊಲೀಸರು ದಂಡ ವಿಧಿಸದೇ, ಬಿಟ್ಟುಕಳಿಸುತ್ತೇವೆಂದು ಲಂಚ ಪಡೆದಿದ್ದಾರೆ. ಘಟನೆಯನ್ನು ಜಪಾನ್ ಪ್ರವಾಸಿ ಗೌಪ್ಯವಾಗಿ ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಬೆಳಕಿಗೆ ಬಂದ ಬಳಿಕ, ಗುರುಗ್ರಾಮ ಸಂಚಾರ ಪೊಲೀಸ್‌ ಠಾಣೆಯ ವಲಯ ಅಧಿಕಾರಿ, ಕಾನ್‌ಸ್ಟೆಬಲ್ ಮತ್ತು ಗೃಹರಕ್ಷಕ ಅಧಿಕಾರಿಯನ್ನು ಅಮಾನತು ಮಾಡಿ ಸಂಚಾರ ವಿಭಾಗದ ಡಿಸಿಪಿ ರಾಜೇಶ್ ಮೋಹನ್ ಆದೇಶಿಸಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋ ಸಂಚಾರ ಸಿಬ್ಬಂದಿಯ ದುಷ್ಕೃತ್ಯವನ್ನು ಬಯಲಿಗೆಳೆದಿದೆ. ಪಾರದರ್ಶಕತೆ ಮತ್ತು ಹೊಣೆಗಾರಿಕೆ ನಾವು ಬದ್ದರಾಗಿದ್ದೇವೆ. ತಪ್ಪಿತಸ್ಥ ಆರೋಪಿಗಳಾದ ವಲಯ ಅಧಿಕಾರಿ ಕರಣ್ ಸಿಂಗ್, ಕಾನ್‌ಸ್ಟೆಬಲ್ ಶುಭಮ್ ಹಾಗೂ ಗೃಹರಕ್ಷಕ ಅಧಿಕಾರಿ ಭೂಪೇಂದರ್ ಅವರನ್ನು ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಅತ್ಯುನ್ನತ ಮಟ್ಟದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಭ್ರಷ್ಟಾಚಾರದ ವಿಚಾರದಲ್ಲಿ ನಾವು ಸಹಿಷ್ಣುತೆ ತೋರುವುದಿಲ್ಲ” ಎಂದು ಗುರುಗ್ರಾಮ ಸಂಚಾರ ಪೊಲೀಸರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಂಗಾಳಕ್ಕೂ ಕಾಲಿಟ್ಟ ಎಸ್‌ಐಆರ್‌ ಭೂತ; ಜನನ ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸರಲ್ಲಿ ಒಬ್ಬರು ಜಪಾನ್‌ ಮಹಿಳೆಯ ಗುರುತಿನ ಚೀಟಿ ಕೇಳಿದ್ದಾರೆ. ಬಳಿಕ, 1,000 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ಕೊಡದಿದ್ದರೆ, ಕೋರ್ಟ್‌ಗೆ ಬರಬೇಕಾಗುತ್ತದೆ ಎಂದು ಬೆದರಿಸಿದ್ದಾರೆ.

ಪ್ರವಾಸಿ ಮಹಿಳೆಯು ಆನ್‌ಲೈನ್‌ನಲ್ಲಿ ಹಣ ಪಾವತಿ ಮಾಡುವುದಾಗಿ ಪ್ರಸ್ತಾಪಿಸಿದ್ದಾರೆ. ಆದರೆ, ಪೊಲೀಸರು ನಗದು ರೂಪದಲ್ಲಿಯೇ ಹಣ ಕೊಡಬೇಕೆಂದು ಕೇಳಿದ್ದಾರೆ. ಬಳಿಕ, ಪ್ರವಾಸಿ ಮಹಿಳೆ ಪೊಲೀಸರಲ್ಲಿ ಒಬ್ಬರಿಗೆ 500 ರೂ. ಮುಖಬೆಲೆಯ ಎರಡು ನೋಟುಗಳನ್ನು ನೀಡಿದ್ದಾರೆ. ಅವರು ಹಣ ನೀಡಿದ್ದರೆ, ಪೊಲೀಸರು ಯಾವುದೇ ರಶೀದಿಯನ್ನೂ ನೀಡದೆ ಕಳಿಸಿದ್ದಾರೆ.

“ಇಡೀ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಪಿ ಮೋಹನ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...