ಪಾಟ್ನಾ| ಮೂರು ವರ್ಷದ ಮಗು ಶವವಾಗಿ ಪತ್ತೆ; ಆಕ್ರೋಶಿತರಿಂದ ಶಾಲೆಗೆ ಬೆಂಕಿ

Date:

ಬಿಹಾರ ರಾಜಧಾನಿ ಪಾಟ್ನಾದ ಶಾಲೆಯೊಂದರ ಆವರಣದ ಟ್ಯಾಂಕಿನೊಳಗಡೆ ಮೂರು ವರ್ಷದ ಮಗು ಶವವಾಗಿ ಪತ್ತೆಯಾಗಿದ್ದು, ಆಕ್ರೋಶಿತರು ಶುಕ್ರವಾರ ಬೆಳಿಗ್ಗೆ ಶಾಲೆಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ದಿಘಾ ಪೊಲೀಸ್ ವ್ಯಾಪ್ತಿಯ ರಾಮ್‌ಜಿಚಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ವರ್ಷ ವಯಸ್ಸಿನ ಮಗು ಶಾಲೆಗೆ ಹೋಗಿದ್ದು, ಶಾಲಾ ಸಮಯ ಮುಗಿದು ಟ್ಯೂಷನ್‌ಗೆ ಹೋಗಿದೆ. ಸಂಜೆಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರು ಮಗುವಿನ ಹುಡುಕಾಟ ಮಾಡಿದ್ದಾರೆ. ಇಂದು ಮುಂಜಾನೆ 3 ಗಂಟೆಗೆ ಶಾಲಾ ಆವರಣದಲ್ಲಿರುವ ಟ್ಯಾಂಕಿನೊಳಗೆ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಕಾರಿನಲ್ಲಿ ಆಕಸ್ಮಿಕ ಬೆಂಕಿ; ಚಾಲಕ ಜೀವಂತ ದಹನ  

ಇದರಿಂದ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಶಾಲೆಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಘಟನೆಯ ವಿವರ ನೀಡಿದ ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಪ್ರಕಾಶ್, “ತಡ ರಾತ್ರಿ ನಮಗೆ ಪೋಷಕರು ಮಗು ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದು ನಮ್ಮ ತಂಡವು ಸ್ಥಳಕ್ಕೆ ತಲುಪಿ ಸಾಕ್ಷ್ಯ ಸಂಗ್ರಹಿಸಲು ಪ್ರಾರಂಭಿಸಿತು. ಸಿಸಿಟಿವಿಯಲ್ಲಿ ಮಗು ಶಾಲೆಗೆ ಪ್ರವೇಶಿಸುತ್ತಿರುವುದನ್ನು ನಾವು ನೋಡಿದ್ದೇವೆ. ಆದರೆ ಶಾಲೆಯಿಂದ ಹೊರಗೆ ಹೋಗುವುದು ಕಂಡುಬಂದಿಲ್ಲ” ಎಂದು ಹೇಳಿದರು.

“ಶವವನ್ನು ಮರೆಮಾಡಲಾಗಿದೆ, ಆದ್ದರಿಂದ ನಾವು ಇದನ್ನು ಕೊಲೆ ಪ್ರಕರಣವಾಗಿ ತನಿಖೆ ನಡೆಸುತ್ತೇವೆ, ಈ ಪ್ರಕರಣಕ್ಕೆ ಸಂಬಂಧಿಸಿ ನಾವು ಮೂವರನ್ನು ಬಂಧಿಸಿದ್ದೇವೆ” ಎಂದು ಮಾಹಿತಿ ನೀಡಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...